LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'BJP ಮಹಾರಾಷ್ಟ್ರದ ಜನರನ್ನು ಸರಣಿ ಸುಳ್ಳುಗಳ ಮೂಲಕ ವಂಚಿಸುತ್ತಿದೆ'- ಸಿ.ಎಂ

ಸಂಡೂರು : ವಾದಾ ದಿಯಾ: ಪೂರಾ ಕಿಯಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿಯ ಸುಳ್ಳು ಜಾಹಿರಾತಿಗೆ ಕಪಾಳಮೋಕ್ಷ ಮಾಡಿದರು.ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಈ ಹೇಳಿಕೆ ನೀಡಿದರು.

ಮಹಾರಾಷ್ಟ್ರದ ಬಿಜೆಪಿ "ಕರ್ನಾಟಕ ಸರ್ಕಾರ ವಾದಾ ಕಿಯಾ: ಧೋಖಾ ದಿಯಾ" ಎಂದು ಸುಳ್ಳು ಜಾಹಿರಾತು ನೀಡಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಭರವಸೆ ಈಡೇರಿಸದೇ, ಯೋಜನೆಯನ್ನೇ ಇನ್ನೂ ಆರಂಭಿಸದೆ ವಂಚಿಸಿದೆ ಎನ್ನುವ ಅರ್ಥದ ಪರಮ ಸುಳ್ಳಿನ ಜಾಹಿರಾತುಗಳನ್ನು ಪುಟಗಟ್ಟಲೆ ನೀಡಿದೆ.

ಈ ಸುಳ್ಳಿನ ಜಾಹಿರಾತನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ ಅವರು ಅವರದೇ ಶೈಲಿಯಲ್ಲಿ ಉತ್ತರಿಸಿ, "ವಾದಾ ದಿಯಾ ಪೂರಾ ಕಿಯಾ" ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದರು.

"ಸುಳ್ಳೇ ಬಿಜೆಪಿಯ ಮನೆ ದೇವರು: ಸಿಎಂ"

ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ. ಗೃಹಲಕ್ಷ್ಮಿಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆ ಕೂಡ ಆಗುತ್ತದೆ. ಆದರೆ ಬಿಜೆಪಿಯವರು ಸುಳ್ಳುಗಳನ್ನು ಹರಡಿಸುತ್ತಾ, ಸುಳ್ಳುಗಳನ್ನು ಹರಡುವುದಕ್ಕೇ ಕೋಟಿ ಕೋಟಿ ಖರ್ಚು ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಹೇಳಿದ್ದೇನು ? ಮಾಡಿದ್ದೇನು?

ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಕೊಡ್ತೀವಿ ಅಂತ ಹೇಳಿದ್ರಲ್ಲಾ ಮೋದಿಯವರೇ ಕೊಟ್ರೇನ್ರೀ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ, ಉದ್ಯೋಗ ಸೃಷ್ಟಿ ಮಾಡಿದ್ರಾ ? ಎಲ್ರೀ ಸ್ವಾಮಿ ನಿಮ್ಮ ಅಚ್ಚೆ ದಿನ್? ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ ಮಾಡಿದ್ರಾ ? ಮೋದಿ ಪ್ರಧಾನಿ ಆಗುವ ಮೊದಲು ದೇಶದ ಸಾಲ ಇದ್ದದ್ದು 54 ಲಕ್ಷ ಕೋಟಿ ಮಾತ್ರ ಇತ್ತು. ಈಗ ನಿಮ್ಮ ಅವಧಿಯಲ್ಲಿ ದೇಶದ ಸಾಲವನ್ನು 185 ಲಕ್ಷ ಕೋಟಿಗೆ ಏರಿಸಿದ್ದೀರಿ. ಇದೇನಾ ಸ್ವಾಮಿ ನಿಮ್ಮ ಅಚ್ಚೆ ದಿನ್ ಎಂದು ವ್ಯಂಗ್ಯವಾಡಿದರು.

BJP ಯವರಿಗೆ ಸಂಡೂರಿನ ಗುಡ್ಡಗಳು, ಗಣಿಗಳ ಮೇಲೆ ಮಾತ್ರ ಪ್ರೀತಿ. BJP ಯವರಿಗೆ ಸಂಡೂರಿನ ಜನರ ಬಗ್ಗೆ, ಸಂಡೂರಿನ ಬಡವರ ಮೇಲೆ ಖಂಡಿತಾ ಪ್ರೀತಿ ಇಲ್ಲ.ನಾನು ಸುಡುಗಾಡಿಗೆ ಹೋಗುವವರೆಗೂ ಸಂಡೂರಿನ‌ ಜನರ ಋಣದಲ್ಲಿ ಇರ್ತೀನಿ. ನನ್ನಪ್ಪ ಇಲ್ಲೇ ಸತ್ತ. ನನ್ನ ದೊಡ್ಡಪ್ಪ ಇಲ್ಲೇ ಸತ್ತ. ನಾನು ಜೀವ ಇರುವವರೆಗೂ ಇಲ್ಲೇ ಈರ್ತೀನಿ. ಇಲ್ಲೇ ಸಾಯ್ತೀನಿ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST