LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರ ವಜಾಗೊಳಿಸಲು ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ

ಬಂಟ್ವಾಳ,ಅ.15: ಅಕಾರಕ್ಕೆ ಬಂದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ರಾಜ್ಯ ಸರ್ಕಾರದ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿರುವ ಹಿಂದೂ ವಿರೋ ಸರ್ಕಾರವನ್ನು ವಜಾಗೊಳಿಸು ವುದ ಕ್ಕಾಗಿ ಬಿಜೆಪಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಂಟ್ವಾಳದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅ.15 ರಂದು ಮಾತನಾಡಿರುವ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ಅವ್ಯಾಹತವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಡಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡು ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದರು.

ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ನಡೆದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸುತ್ತಲೇ ಬಂದಿರುವ ಸಿದ್ದರಾಮಯ್ಯ ಈಗ ನಿವೇಶನಗಳನ್ನು ವಾಪಸ್ ಕೊಡಿಸುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಟೀಕಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST