Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್​ಗೆ ಕಾಂಗ್ರೆಸ್ ಗಾಳ,

ರಾಮನಗರ: ಪ್ರಸಕ್ತ ಪಕ್ಷಾಂತರ ಪರ್ವ ಜೋರಾಗಿದೆ. ಈ ನಡುವೆ ಕಾಂಗ್ರೆಸ್ ಪಕ್ಷ ಬಿಜೆಪಿ ಅಭ್ಯರ್ಥಿಗಳಿಗೆ ಗಾಳ ಹಾಕಲು ಮುಂದಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar)​ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಕದಲೂರು ಉದಯ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ತೆರೆಮರೆಯಲ್ಲಿ ತಂತ್ರಗಾರಿಗೆ ಹೆಣೆದಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಇಂದು ಮದ್ದೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕದಲೂರು ಉದಮ್ (Kadaluru Uday) ಅವರು ತಾಲೂಕಿನ ಕನಕನಗರದಲ್ಲಿ ಪ್ರಚಾರದಲ್ಲಿದ್ದ ಯೋಗೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಉದಯ್ ಭೇಟಿಯಾಗಿದೆ ಎನ್ನಲಾಗುತ್ತಿದೆ.

ಯಾರು ಈ ಕದಲೂರು ಉದಯ್?


ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ನಾಯಕರಲ್ಲಿ ಕದಲೂರು ಉದಯ್ ಒಬ್ಬರಾಗಿದ್ದರು. ಮದ್ದೂರು ಕ್ಷೇತ್ರದ ಮುಖಂಡ ಉದಯ್, ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಅದರಂತೆ ಮಾರ್ಚ್ ತಿಂಗಳಲ್ಲಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಸಮಾಜಸೇವೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಉದಯ್, ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ನೆರವಾಗುವ ಮೂಲಕ ಗಮನ ಸೆಳೆದಿದ್ದರು. ಸದ್ಯ ಮೂರನೇ ಪಟ್ಟಿಯಲ್ಲಿ ಉದಯ್​ಗೆ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ.

ಉದಯ್ ಪಕ್ಷ ಸೇರ್ಪಡೆ ನಂತರ ಮಾತನಾಡಿದ್ದ ಡಿಕೆ ಶಿವಕುಮಾರ್, ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್​ನ ಡಿಸಿ ತಮ್ಮಣ್ಣ ಅವರನ್ನು ಸೋಲಿಸಲು ಉದಯ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದಿದ್ದರು. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಉದಯ್, ಕಾಂಗ್ರೆಸ್​​ನಿಂದ ಟಿಕೆಟ್ ಪಡೆದು ಮದ್ದೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದರು. ಅಲ್ಲದೆ, ಮೈಸೂರು ಭಾಗದಲ್ಲಿ ಜೆಡಿಎಸ್ ಶಕ್ತಿ ಕುಂದಿಸಬೇಕು ಹಾಗೂ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ