Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬಿಜೆಪಿ ಮತಗಳ್ಳತನ ವಿರುದ್ಧ 1.12 ಕೋಟಿ ಸಹಿ ಸಂಗ್ರಹ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಮತ- ನಮ್ಮ ಹಕ್ಕು! ನಮ್ಮ ಮತ- ನಮ್ಮ ಹಕ್ಕು! ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ - ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ.

ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ 6,018 ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಇದೇ ರೀತಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವಾರು ಇತರ ರಾಜ್ಯಗಳಲ್ಲಿ ಅಕ್ರಮಗಳು ಕಂಡುಬಂದಿವೆ ಎಂದು ಡಿಸಿಎಂ ಅವರು ಆರೋಪಿಸಿದರು.

ಮತ ಕಳ್ಳತನ ತಡೆದು ಪ್ರಜಾಪ್ರಭುತ್ವ ಉಳಿಸಲು ಕರ್ನಾಟಕದಿಂದ ಧ್ವನಿ ಎತ್ತಿರುವ ರಾಹುಲ್‌ಗಾಂಧಿ ಅವರಿಗೆ ಕಾಂಗ್ರೆಸ್‌ಪಕ್ಷ ಸೇರಿದಂತೆ ಎಲ್ಲಾ ಸಾರ್ವಜನಿಕರು ಪಕ್ಷಬೇಧ ಮರೆತು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ.

ಮತದಾನದ ಹಕ್ಕಿನ ರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಕೂಡ ಪಾಲ್ಗೊಂಡಿದ್ದೇವೆ. ವೋಟ್‌ಚೋರಿ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಲ್ಲಿ ಇದುವರೆಗೆ 1,12,41,000 ಮತದಾರರು ಸಹಿ ಮಾಡಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.


ಸಹಿ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳನ್ನು 10ನೇ ತಾರೀಖಿನಂದು ದೆಹಲಿಯ ಎಐಸಿಸಿ ಕಚೇರಿಗೆ ತೆಗೆದುಕೊಂಡು ಹೋಗಿ ಮಾಹಿತಿ ನೀಡಲಾಗುವುದು. ಮತಗಳ್ಳತನ ವಿರುದ್ಧ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಅಭಿಯಾನದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಡಿಸಿಎಂ ಅವರು ತಿಳಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಮತಗಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ