Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾಲ್ತುಳಿತ ಪ್ರಕರಣ ಸಂಬಂಧ ಬಿಜೆಪಿ ರಾಜಕೀಯ ಮಾಡುತ್ತಿದೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್​ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.‌


ವಿಧಾನಸೌಧದಲ್ಲಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿಯವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಘಟನೆಯಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.

ಅರಸು ಪ್ರತಿಮೆಗೆ ಮಾಲಾರ್ಪಣೆ:
ಇದೇ ವೇಳೆ
, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.‌

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ಅನ್ಯಾಯ, ತುಳಿತಕ್ಕೊಳಗಾದವರು ಹಾಗೂ ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಕರ್ನಾಟಕ ರಾಜ್ಯದಲ್ಲಿ ಅರಸು ಅವರಿಂದಾಗಿ ಬಡತನ ನಿರ್ಮೂಲನಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನೆರವೇರಿದವು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗ ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ನೀಡಿದರು ಎಂದು ತಿಳಿಸಿದರು.

ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಜೀತ ಪದ್ಧತಿ ರದ್ದು ಮಾಡಿದಲ್ಲದೆ ಮಲ ಹೊರುವ ಪದ್ಧತಿ ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದು ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ರಾಜ್ಯ ಎಂದಿದ್ದ 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ, ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ