LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ- ಸ್ಥಳದಲ್ಲೇ ಸಾವು

ಪಾಟ್ನಾ : ಬಿಹಾರ ಮೂಲದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ಅವರ ಮನೆಯ ಮುಂದೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೋಟೆಲ್ ಪಕ್ಕದಲ್ಲಿರುವ ಟ್ವಿನ್ ಟವರ್ ಸೊಸೈಟಿಯಲ್ಲಿ ವಾಸಿಸುತ್ತಿದ್ದ ಗೋಪಾಲ್ ಖೇಮ್ಕಾ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಗುಂಡು ಹಾರಿಸಿ ತಕ್ಷಣ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗುಂಡು ಮತ್ತು ಶೆಲ್ ಕವಚವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಕೇಂದ್ರ ಎಸ್‌ಪಿ ದೀಕ್ಷಾ, ಜುಲೈ 4 ರ , ರಾತ್ರಿ 11 ಗಂಟೆ ಸುಮಾರಿಗೆ, ಗಾಂಧಿ ಮೈದಾನ ದಕ್ಷಿಣ ಪ್ರದೇಶದಲ್ಲಿ ಈ ಗುಂಡಿನ ದಾಳಿ ನಡೆಸಲಾಗಿದೆ. ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಟಾರ್ಗೆಟ್​​ ಮಾಡಿ ಈ ದಾಳಿಯನ್ನು ನಡೆಸಲಾಗಿದೆ. ಇದೀಗ ತನಿಖೆ ಆರಂಭಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026