LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ : 6 SDPI ಕಾರ್ಯಕರ್ತರಿಗೆ ಕಠಿಣ ಶಿಕ್ಷೆ

ಉತ್ತರಕನ್ನಡ : ಕಳೆದ 2019ರಲ್ಲಿ ಇಲ್ಲಿನ ಕಸ್ತೂರಬಾ ನಗರದಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಕೊಲೆ ಯತ್ನ ಹಾಗೂ ಎಸ್‌ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಡಿಪಿಐ ಕಾರ್ಯಕರ್ತರಾಗಿದ್ದ ಆರು ಮಂದಿ ಆರೋಪಿಗಳಿಗೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಿರಣ ಕಿಣಿ ಅವರು, ಆರು ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿ 10 ವರ್ಷಗಳ ಶಿಕ್ಷೆ ವಿಧಿಸಿದರು. ​ಮೊಹಮ್ಮದ್ ಫಾರೂಕ್ (32) ಮೊಹಮ್ಮದ್ ಸಲೀಂ (36), ​ಸರ್ಫರಾಜ್ ಪಟೇಲ್ (35), ಮಹಮದ್ ಆರಿಫ್ (34), ​ನಿಸಾರ್ ಅಹಮದ್ ಶೇಖ್ (29) ಹಾಗೂ ​ಮೊಸಿನ್ ಅಬ್ದುಲ್ ಶೂಖರ್ (39) ಶಿಕ್ಷೆಗೆ ಒಳಗಾದವರು ಎಂದು ತಿಳಿದುಬಂದಿದೆ.

​ನ್ಯಾಯಾಲಯವು ಶಿಕ್ಷೆಯ ಜೊತೆಗೆ ಪ್ರತಿಯೊಬ್ಬ ಆರೋಪಿಗೆ 18 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ, ಗಾಯಾಳು ಅನೀಶ್ ತಹಶೀಲ್ದಾರ್ ಅವರಿಗೆ ಒಟ್ಟು 60 ಸಾವಿರ ರೂ. ಹಾಗೂ ಮೃತ ಅಸ್ಲಂ ಸೈಯದ್ ಅವರ ತಾಯಿಗೆ 50 ಸಾವಿರ ರೂ. ಪರಿಹಾರ ಧನ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

2019ರ ಏಪ್ರಿಲ್ 23ರಂದು ರಾತ್ರಿ ಕಸ್ತೂರಬಾ ನಗರದ ಕರಿಗುಂಡಿ ರಸ್ತೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಂದಿನ ಅಧ್ಯಕ್ಷ ಅನೀಶ್ ತಹಶೀಲ್ದಾರ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿ ದಾಳಿ ನಡೆಸಲಾಗಿತ್ತು. ಈ ಸಂಘರ್ಷದಲ್ಲಿ ಅನೀಶ್ ಅವರು ಗಾಯಗೊಂಡು ಪಾರಾಗಿದ್ದರು.

ಇದೇ ವೇಳೆ ಎಸ್‌ಡಿಪಿಐ ಕಾರ್ಯಕರ್ತ ಅಸ್ಲಂ ಸೈಯದ್ ಬಾಬಾಜಾನ್ ಎಂಬವರು ಹತ್ಯೆಗೀಡಾಗಿದ್ದರು. ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026