LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ

ದಾವಣಗೆರೆ : ಭಾರತೀಯ ಜನತಾ ಪಾರ್ಟಿಯು ತನ್ನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಏಳ್ಗೆಗಾಗಿ SCSP-TSP ಯೋಜನೆಯ ಅಡಿಯಲ್ಲಿ ಮೀಸಲಿಟ್ಟಂತಹ ಸುಮಾರು 11,500 ಕೋಟಿಗಿಂತಲೂ ಹೆಚ್ಚು ಹಣವನ್ನು ಬಿಟ್ಟಿ ಭಾಗ್ಯಗಳಿಗೆ ವಿನಿಯೋಗಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಕಾಂಗ್ರೆಸ್ ಸರಕಾರ ಅನ್ಯಾಯ ಮಾಡಿದೆಯೆಂದು ಬಿಜೆಪಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ.

ಚುನಾವಣೆಯಲ್ಲಿ ತಮ್ಮ ಗೆಲ್ಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹ 11,144 ScSP/TSP ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡು ಡೋಂಗಿ ದಲಿತ ಕಾಳಜಿಯನ್ನು ಬಯಲು ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಹಿತದ ರಕ್ಷಣೆ ಮಾಡಬೇಕಿದ್ದ ಸಮಾಜಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪನವರು ಈ ಅನ್ಯಾಯದ ವಿರುದ್ದ ಸೊಲ್ಲೆತ್ತದೆ ಕಾಂಗ್ರೆಸ್ ಪಾರ್ಟಿಯ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ₹10,000 ಕೋಟಿ ಹಣವನ್ನು ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ಇವರಿಗೆ ದಲಿತರ ಹಿತಾಸಕ್ತಿಗಿಂತ ಓಟು ಬ್ಯಾಂಕ್ ರಾಜಕಾರಣವು ಸರ್ಕಾರಕ್ಕೆ ಆದ್ಯತೆಯಾಗಿರುವುದು ಶೋಚನೀಯ ಸಂಗತಿ ಎಂದು ಪ್ರತಿಭಟನಾ ನಿರತರು ಹೇಳಿದರು.

ಮೊರಾರ್ಜಿ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ.

ಇದಲ್ಲದೆ ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವು ಕೂಡಾ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ದಲಿತ ವಿದ್ಯಾರ್ಥಿಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಸಲುವಾಗಿ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದವರ ಗೃಹ ನಿರ್ಮಾಣ ಯೋಜನೆಯು ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ, ರಾಜ್ಯ ಸರಕಾರದ ಯೋಜನೆಯು ಕೋಮಾ ಸ್ಥಿತಿಗೆ ತಲುಪಿದೆ.

ರೈತ ನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವು ಸ್ಥಗಿತಗೊಂಡಿದೆ. ಹಾಗೂ ಕಿಸಾನ್ ಸಮ್ಮಾನ್ ಯೋಜನೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದ ರೂ.4,000 ಗಳಿಗೂ ಕತ್ತರಿ ಪ್ರಯೋಗವಾಗಿದೆ. ಸಿದ್ದರಾಮಯ್ಯನವರು ಬಾಯಿ ತೆಗೆದರೆ ದಲಿತ ಮತ್ತು ಆದಿವಾಸಿಗಳ ಕಲ್ಯಾಣದ ಬಗ್ಗೆ ಮಾತನಾಡುವುದಕ್ಕೆ ಮಾತ್ರ ಅವರ ಹಿತಾಸಕ್ತಿಯನ್ನು ಸಿಮೀತಗೊಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಯೋಜನೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಸಕ್ತಿಯಿಲ್ಲದಂತಾಗಿದೆ. ರಸ್ತೆಬದಿಯ ವ್ಯಾಪಾರಿಗಳಿಗೆ ಕೇಂದ್ರ ಸರಕಾರದ ಸ್ವ-ನಿಧಿ ಯೋಜನೆಗೆ ರಾಜ್ಯ ಸರ್ಕಾರವು ದಲಿತ ಉದ್ಯಮಿಗಳಿಗೆ ಪ್ರೋತ್ಸಹಧನವಾಗಿ ಬಡ್ಡಿಯಲ್ಲಿ ಪಾಲು ಕೊಡಬಹುದಿತ್ತು, ಆದರೆ ಅದರ ಕಡೆ ಗಮನವೇ ಕೊಟ್ಟಿಲ್ಲ.

ಕೇಂದ್ರ ಸರ್ಕಾರ ಮುದ್ರಾ ಯೋಜನೆಯಲ್ಲಿ ದಲಿತರಿಗೆ ಸ್ವಯಂ ಉದ್ಯೋಗ ನೀಡಲು ಉತ್ತೇಜನ ಕೊಡುತ್ತಿದೆ. ಆದರೆ ರಾಜ್ಯ ಸರಕಾರ ದಲಿತ ಉದ್ಯಮಿದಾರರನ್ನು ರೂಪಿಸಲು ಮತ್ತು ಉತ್ತೇಜಿಸಲು ಯಾವುದೇ ಆಸಕ್ತಿವಹಿಸಿಲ್ಲ ಮತ್ತು ಯಾವುದೇ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿಯೂ ಇಲ್ಲ.

ಗ್ಯಾರಂಟಿಗೆ ಹಣ ನೀಡಬೇಕಾದ ಕಾರಣ 2024-25 ಮುಂಗಡ ಪತ್ರದಲ್ಲಿ ಮತ್ತೆ ಹನ್ನೊಂದು ಸಾವಿರ ಕೋಟಿ ಅನುದಾನ ಕಡಿತವಾಗಿದೆ. ಸಂವಿಧಾನ ಜಾಥಾ ಮಾಡುತ್ತಿರುವ ಸರಕಾರ ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ದಲಿತರಿಗೆ ಸೇರಬೇಕಾದ ಅನುದಾನವನ್ನು ನಿರಾಕರಿಸಿ ಅನ್ಯಾಯ ಮಾಡುತ್ತಿದ್ದಾರೆ. ಇವರ ಸಂವಿಧಾನದ ಬದ್ಧತೆಯು ಕೇವಲ ಪ್ರಚಾರದಲ್ಲಿ ಉಳಿದು ಆಚರಣೆಯಲ್ಲಿ ಶೂನ್ಯವಾಗಿದೆ. ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರಕಾರದ ದಲಿತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನಾ ನಿರತರು ಹೇಳಿದರು.

ಮುಂಗಡ ಪತ್ರದಲ್ಲಿ ScSP/tSP ಹಣವನ್ನು ಕೂಡಲೇ ವಾಪಸ್ ನೀಡಬೇಕು. ಸಂವಿಧಾನ ಬದ್ದ ಕಲ್ಯಾಣ ಯೋಜನೆಗಳ ಹಣದ ದುರುಪಯೋಗ ಸಲ್ಲದು ಎಂದು ಎಚ್ಚರಿಸುತ್ತೆವೆ. ನಿಮ್ಮ ಸ್ವಾರ್ಥಕ್ಕೆ ದಲಿತರಿಗೆ ಅನ್ಯಾಯ ಮಾಡಬಾರದು ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಎನ್ ರಾಜಶೇಖರ್ ನಾಗಪ್ಪ , ಪ್ರಧಾನ ಕಾರ್ಯದರ್ಶಿಗಳಾದ ಐರಾಣಿ ಅಣ್ಣೇಶ್, ಧನಂಜಯ ಕಡ್ಲೆಬಾಳ, ಅನಿಲ್ ಕುಮಾರ್ ನಾಯಕ್, ಉತ್ತರ ವಿಧಾನಸಭಾ ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್, ಮಾಜಿ ವಿಧಾನಸಭಾ ವಿಧಾನ ಪರಿಷತ್ ಡಾಕ್ಟರ್ ಎ ಎಚ್ ಶಿವಯೋಗಿ ಸ್ವಾಮಿ, ಅನೀತ ಕುಮಾರ ಜಿ. ಎಸ್, ಮಾಜಿ ಶಾಸಕರಾದ ಎಂ ಬಸವರಾಜ ನಾಯಕ, ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರಾದ ವೀರೇಶ್ ಹನಗವಾಡಿ, ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸ್ ಕರಿಯಪ್ಪ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಬಿಟಿ ಶಾಮ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಎಸ್ ಟಿ ವೀರೇಶ್, ಪ್ರಸನ್ನ ಕುಮಾರ್, ಶಿವಾನಂದ, ಪಕ್ಷದ ಮುಖಂಡರುಗಳಾದ ಯಶವಂತರಾವ್ ಜಾದವ್, ಬಾತಿ ವೀರೇಶ್, ಮುಂಜನಾಯಕ, ವಿಶ್ವಾಸ್ ಹೆಚ್. ಪಿ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಹನುಮಂತ ನಾಯಕ, ಗಂಗಾಧರ ಜಿ.ವಿ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ, ಪಿ.ಸಿ ಶ್ರೀನಿವಾಸ್, ಉತ್ತರ ವಿಧಾನಸಭಾ ಅಧ್ಯಕ್ಷರಾದ ಬೇತುರ್ ಸಂಗಪ್ಪ, ಸಾಮಾಜಿಕ ಜಾಲತಾಣ ಸಂಚಾಲಕರಾದ ಕೊಟ್ರೇಶ್ ಗೌಡ, ಕೆ.ಜಿ ಕಲ್ಲಪ್ಪ , ಬಾತಿ ಸಿದ್ದೇಶ್, ರವಿ ನಾಯಕ್, ಬಾಳೆಕಾಯಿ ಶಿವು, ಕಿಶೋರ್, ಗುಡ್ಡೇಶ್, ಸೋಗಿ ಗುರು, ತರಕಾರಿ ಶಿವು, ವಿನಯ್ H, ಸಚಿನ್ ವರ್ಣೇಕರ್, ರಘು ವರ್ಣೇಕರ್, ರಾಜು M, ಗುರು ಕೆ. ವಿ, ರೂಪ ಕಾಟವೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೈಲಜಾ, ಹಾಗೂ ಪಕ್ಷದ ಕಾರ್ಯಕರ್ತಗಳು ಉಪಸ್ಥಿತಿಯಲ್ಲಿ ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್