LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಕ್ಷದಿಂದ ಯತ್ನಾಳ್ ಉಚ್ಚಾಟಿಸುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹ

ಮೈಸೂರು :  ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣದಿಂದ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹಾಲಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸುದ್ದಿಗೋಷ್ಠಿ ನಡುವೆ 'ಯತ್ನಾಳ್ ಉಚ್ಚಾಟಿಸಿ. ಬರೀ ಸುದ್ದಿಗೋಷ್ಠಿ ಮಾಡಿ ಏನೂ ಪ್ರಯೋಜನವಿಲ್ಲ' ಎಂದು ಕಾರ್ಯಕರ್ತರು ಕೂಗಿದ್ದಾರೆ. ಯತ್ನಾಳ್ ವಿರುದ್ಧ ಧಿಕ್ಕಾರ ಕೂಗುತ್ತಾ, ಮೊದಲು ಅವನನ್ನ ಪಕ್ಷದಿಂದ ಕಿತ್ತೊಗೆಯಿರಿ ಎಂದು ಕಿಡಿಕಾರಿದ್ದಾರೆ.

ಸದ್ಯ ವಕ್ಫ್ ವಿರೋಧಿ ಹೋರಾಟದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ಡಿ.3ರಂದು ಕೋರ್ ಕಮಿಟಿ ಸಭೆ ನಿಗದಿ ಮಾಡಿದೆ. ಅಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ತರುಣ್ ಚುಗ್ ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ಹಾಗೂ ವಕ್ಫ್ ಅಭಿಯಾನ ಕೈಗೊಂಡಿರುವ ಯತ್ನಾಳ್ ಬಣದಿಂದ ಮಾಹಿತಿ ಸಂಗ್ರಹಿಸಲಿದ್ದಾರೆ. ತರುಣ್ ಚುಗ್ ವರದಿ ಆಧರಿಸಿ ದೆಹಲಿ ನಾಯಕರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೈಕಮಾಂಡ್ ತಿಳಿಸಿದೆ.

ಇತ್ತೀಚೆಗೆ ವಿಜಯಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ವಕ್ಫ್ ವಿರುದ್ಧ ಯತ್ನಾಳ್ ಅವರು ಹೋರಾಟ ಹಮ್ಮಿಕೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ನಾಯಕ ಡಿ.ವಿ ಸದಾನಂದಗೌಡ ಸೇರಿದಂತೆ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ನಡುವೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರು ವಿಜಯೇಂದ್ರ ಪರ ಬ್ಯಾಟಿಂಗ್ ಮಾಡುತ್ತಾ, ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಯತ್ನಾಳ್ ವಿಚಾರವಾಗಿ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಕಾರ್ಯಕರ್ತರು ಪಕ್ಷದಿಂದ ಉಚ್ಚಾಟಿಸುವಂತೆ ಗದ್ದಲ ಎಬ್ಬಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ