ಬಳ್ಳಾರಿ,ಅ.10 : ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಸ್. ಸಿದ್ದಪ್ಪ ಅವರ ನೇತೃತ್ವದಲ್ಲಿ ಸಿರುಗುಪ್ಪ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಯುವ ಮೋರ್ಚಾದ ಸಂಘಟನಾತ್ಮಕ ಸಭೆ ನಡೆಯಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರಣಗೌಡ ಹಾಗೂ ಮಂಡಲ ಯುವ ಮೋರ್ಚಾ ಅಧ್ಯಕ್ಷ ಶೇಖರ್ ಗೌಡ ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವುದು, ಯುವಕರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಂಬಣ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್, ಮಂಡಲ ಪ್ರಧಾನ ಕಾರ್ಯದರ್ಶಿ ಗಂಗಾಧರ್, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷರಾದ ಅಯ್ಯಪ್ಪ, ಗಾದಿಲಿಂಗ, ತಿಮರಾಜ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.