Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಡಿ.ಎನ್. ಜೀವರಾಜ  

ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬಿಜೆಪಿ ನಾಯಕ ಡಿ. ಎನ್. ಜೀವರಾಜ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬುಧವಾರ ಮಧ್ಯಾಹ್ನ 3:30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಜೀವರಾಜ ಅವರಿಗೆ ಪ್ರಮಾಣವಚನ ಬೋಧಿಸಿದರು. ಜೀವರಾಜ ಅವರು ಶೃಂಗೇರಿಯ ಶಾರದಾಂಬೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸಭೆ ವಿಪಕ್ಷದ ನಾಯಕ ಆರ್ ಅಶೋಕ ಹಾಗೂ ಮತ್ತು ವಿಧಾನ ಪರಿಷತ್ತಿನ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

2023ರ ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಟಿ ಡಿ ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋತಿದ್ದ ಜೀವರಾಜ ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆಯ ನಂತರ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರುಎಣಿಕೆ ಮಾಡಲಾಯಿತು. ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಪಡೆದಿದ್ದ 569 ಅಂಚೆ ಮತಗಳಲ್ಲಿ 318 ಮತಗಳು ಅಸಿಂಧು ಎಂದು ಘೋಷಿಸಲ್ಪಟ್ಟಿದ್ದು, ಇದರಿಂದ ಫಲಿತಾಂಶದಲ್ಲಿ ಬದಲಾವಣೆಯಾಗಿದೆ. ಇದರ ಪರಿಣಾಮವಾಗಿ ಬಿಜೆಪಿಯ ಡಿ.ಎನ್. ಜೀವರಾಜ ಅವರು 52 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ