Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಂಡ್ಯದಲ್ಲಿ ರಕ್ತದಾನ ಸಪ್ತಾಹ

ಸುದ್ದಿಮೂಲ ವಾರ್ತೆ


ಮಂಡ್ಯ, ಜೂನ್‌ 8 : ವಿಶ್ವ ರಕ್ತದಾನಿಗಳ ದಿನ ಅಂಗವಾಗಿ ಜಿಲ್ಲೆಯಲ್ಲಿ ರಕ್ತದಾನ ಸಪ್ತಾಹ ಆರಂಭವಾಗಿದೆ ಎಂದು ಮಾಂಡವ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಭವಾನಿಶಂಕರ್ ಹೇಳಿದರು.


ನಗರದ ಹೊರವಲಯದಲ್ಲಿರುವ ಮಾಂಡವ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ರಕ್ತದಾನ ಸಪ್ತಾಹ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕವು ಜೂನ್‌ 7 ರಿಂದ ವಿವಿಧ ಕಾಲೇಜುಗಳಲ್ಲಿ ರಕ್ತದಾನ ಸಪ್ತಾಹ ಮೂಲಕ ರಕ್ತ ಸಂಗ್ರಹ ಅಭಿಯಾನ ನಡೆಸುತ್ತಿದೆ. ಮಿಮ್ಸ್ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ  ಮಾಂಡವ್ಯ ಪ್ರಥಮ ದರ್ಜೆ ಕಾಲೇಜಿನಲ್ಲೂ ಸಪ್ತಾಹದ ಮೂಲಕ ರಕ್ತ ಸಂಗ್ರಹವಾಗಲಿದೆ. ನಮ್ಮ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿದ್ದಾರೆ. ಸುಮಾರು 30 ರಿಂದ 40 ಯೂನಿಟ್ ರಕ್ತಸಂಗ್ರಹವಾಗುವ ನಿರೀಕ್ಷೆ ಇದೆ ಎಂದರು.


ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಮಾತನಾಡಿ, ರಕ್ತಕ್ಕೆ ರಕ್ತವೇ ಔಷಧ, ಪರ್ಯಾಯ ವಸ್ತು ಸಂಶೋಧನೆಯಾಗದ ಕಾರಣ, ರಕ್ತದಾನದ ಮೂಲಕ ರಕ್ತವನ್ನು ಸಂಗ್ರಹಿಸಿ ಅಗತ್ಯ ಉಳ್ಳವರಿಗೆ ರಕ್ತ ನೀಡುವ ಕಾರ್ಯ ಸಾಗುತ್ತಿದೆ.  ಪ್ರತಿ ವರ್ಷ ವಿಶ್ವ ರಕ್ತದಾನಿಗಳ ದಿನ ಪ್ರಯುಕ್ತ ರಕ್ತದಾನ ಸಪ್ತಾಹವನ್ನು ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ನಡೆಸುತ್ತಿದೆ ಎಂದು ತಿಳಿಸಿದರು.


ಜೂನ್‌ 7ರಂದು ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ200 ಯುನಿಟ್ ರಕ್ತ ಸಂಗ್ರಹವಾಯಿತು. ಜಿಲ್ಲೆಯಲ್ಲಿ ರಕ್ತದ ಕೊರತೆ ಬಹಳಷ್ಟಿದೆ. ಪ್ರತಿದಿನ ರಕ್ತದ ಬೇಡಿಕೆ ಹೆಚ್ಚಳವಾಗುತ್ತಿದೆ. ಸಂಗ್ರಹ ರಕ್ತವನ್ನು ಸರ್ಕಾರಿ ಆಸ್ಪತ್ರೆ ರಕ್ತನಿಧಿಕೇಂದ್ರಕ್ಕೆ ಕೊಡಲಾಗುತ್ತದೆ. ಸುರಕ್ಷಿತವಾಗಿಟ್ಟು, ಅನೇಕ ರೋಗಿಗಳಿಗೆ, ಗರ್ಭಿಣಿ, ಬಾಣಂತಿ, ಅಪಘಾತಕ್ಕೀಡಾದ ಜೀವಗಳನ್ನು ಉಳಿಸುವ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದು ಹೇಳಿದರು.


ಇಂದಿನ ಯುವಕರು, ಯುವತಿಯರು, ಆರೋಗ್ಯವಂತರು ರಕ್ತದಾನ ಮಾಡಿ ಜೀವ ಉಳಿಸುವ ನಿಟ್ಟಿನಲ್ಲಿ ಮಾನವೀಯತೆ ಮೆರಯಬೇಕು.  ರಕ್ತದಾನ ಮಾಡುವುದರಿಂದ ಅನೇಕ ರೋಗಗಳಿಂದ ಮುಕ್ತರಾಗಬಹುದು, ಒಂದು ಜೀವ ಉಳಿಸಿದ ತೃಪ್ತಿ ರಕ್ತದಾನಿಗಳದ್ದಾಗುತ್ತದೆ. ಸಾಧ್ಯವಾದಷ್ಟು ಯುವಜನಾಂಗ ರಕ್ತದಾನ ಮಾಡುವ ಮನೋಭಾವ ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಇದೇ ಸಂದರ್ಭದಲ್ಲಿ ರಕ್ತದಾನ ಮಾಡಿದ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ,, ಉಪನ್ಯಾಸಕರುಗಳಿಗೆ ರಕ್ತನಿಧಿ ಕೇಂದ್ರದಿಂದ ಪ್ರಮಾಣಪತ್ರಗಳನ್ನು ನೀಡಿಲಾಯಿತು.


 

ಕಾರ್ಯಕ್ರಮದಲ್ಲಿ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ.ಕಣ್ಮಣಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಜಂಟಿಕಾರ್ಯದರ್ಶಿ ರಂಗಸ್ವಾಮಿ, ಶೈಕ್ಷಣಿಕ ಪಾಕಲುದಾರ ಮಹೇಶ್, ಮುಖ್ಯಶಿಕ್ಷಕ ರಾಜಣ್ಣ, ರಕ್ತನಿಧಿ ಕೇಂದ್ರ ಸಿಬ್ಬಂದಿಗಳಾದ ಜ್ಞಾನರಾಜ್, ಧನಂಜಯ, ರಾಜು ಮತ್ತಿತರರಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ