LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗಿ ನಿಯಂತ್ರಣಕ್ಕೆ ಬಿಎಂಟಿಸಿ ಮುಂಜಾಗೃತಾ ಕ್ರಮ

ಬೆಂಗಳೂರು: ಬೆಂಗಳೂರು ನಗರದಲ್ಲಿ ಡೆಂಗ್ಯೂ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಬಿಎಂಟಿಸಿ ಎಲ್ಲಾ ಘಟಕಗಳಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿ.ಎಂ.ಟಿ.ಸಿ.) ಬೆಂಗಳೂರು ನಗರ ಮತ್ತು ಅದಕ್ಕೆ ಸುತ್ತಮುತ್ತಲಿನ ಉಪನಗರ ಹಾಗೂ ಗ್ರಾಮಗಳಿಂದ ನಗರದೊಳಗೆ ನಿರಂತರ ಸಾರಿಗೆ ಸೌಲಭ್ಯ ಒದಗಿಸಲು 49 ಘಟಕಗಳು, 10 ಟಿ.ಟಿ.ಎಂ.ಸಿ., ಮೂರು ಪ್ರಮುಖ ಬಸ್ ನಿಲ್ದಾಣಗಳು (ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ ಬಸ್ ನಿಲ್ದಾಣ) ಮತ್ತು 4 ಕಾರ್ಯಾಗಾರಗಳನ್ನು ಸ್ಥಾಪಿಸಿದೆ.

ಬೆಂಗಳೂರು ನಗರದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡೆಂಗಿ ನಿಯಂತ್ರಣಕ್ಕೆ ವಿವಿಧ ಮಾರ್ಗದರ್ಶನಗಳನ್ನು ನೀಡಿದೆ. ಈ ಮಾರ್ಗದರ್ಶನಗಳ ಆಧಾರದ ಮೇಲೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ತನ್ನ ಎಲ್ಲಾ ಘಟಕಗಳು, ಟಿ.ಟಿ.ಎಂ.ಸಿ.ಗಳು, ಮತ್ತು ಪ್ರಮುಖ ಬಸ್ ನಿಲ್ದಾಣಗಳಲ್ಲಿ ನೀರು ನಿಲ್ಲದಂತೆ ಸ್ವಚ್ಚತಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್. ಆರ್., ಭಾ.ಆ.ಸೇ. ಅವರು, ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ, ಘಟಕ ವ್ಯವಸ್ಥಾಪಕರುಗಳಿಗೆ, ನಿಲ್ದಾಣಾಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದರೊಂದಿಗೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ನಮ್ಮ ಎಲ್ಲಾ ಸ್ಥಳಗಳಲ್ಲಿ ಲಾರ್ವಿಸೈಡ್ಗಳನ್ನು ಸಿಂಪಡಿಸಲಾಗುತ್ತಿದೆ.

ಡೆಂಗಿ ಹೋಗಲಾಡಿಸಲು ನಮ್ಮ ಸಿಬ್ಬಂದಿಗಳು ನಿಲ್ಲಿಸಿದ ಕ್ರಮಗಳು ಇಂತಿವೆ:


1. ಘಟಕಗಳಲ್ಲಿ ಬಳಸಿದ ಟೈರುಗಳಲ್ಲಿ ನೀರು ಶೇಖರಿಸಿದಂತೆ ಎಚ್ಚರಿಕೆ.
2. ನೀರು ಶೇಖರಿಸುವ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್ಗಳ ಮೇಲೆ ಮುಚ್ಚಳಗಳನ್ನು ಮುಚ್ಚಲು ಕ್ರಮ.
3. ಘಟಕಗಳಲ್ಲಿ ಶೇಖರಣೆಯಾಗುವ ಘನತ್ಯಾಜಗಳಲ್ಲಿ ನೀರು ನಿಲ್ಲದಂತೆ ಕ್ರಮ ಹಾಗೂ ವಿಲೇವಾರಿ ಮಾಡುವುದು.
4. ಹೂವಿನ ಹೂದಾನಿಗಳಲ್ಲಿ ನೀರು ಶೇಖರಿಸಿದಂತೆ ಎಚ್ಚರಿಕೆ.
5. ಕಟ್ಟಡದ ಮೆಟ್ಟಿಲುಗಳು ಮತ್ತು ಮೇಲ್ಚಾವಣಿಯ ಮೇಲೆ ನೀರು ನಿಲ್ಲದಂತೆ ಎಚ್ಚರಿಕೆ.

[video width="478" height="850" mp4="https://beestimes.com/wp-content/uploads/2024/07/VID-20240709-WA0006.mp4"][/video]

ಈ ಎಲ್ಲಾ ಕ್ರಮಗಳು ಸೊಳ್ಳೆಗಳ ಸಂಖ್ಯೆಯನ್ನು ನಿಯಂತ್ರಿಸಿ, ಡೆಂಗಿ ಜ್ವರ ಹರಡುವುದನ್ನು ತಡೆಯಲು ಸಹಾಯಮಾಡುತ್ತವೆ. ಸಂಸ್ಥೆಯು ಈ ಕ್ರಮಗಳನ್ನು ಸಂಪೂರ್ಣವಾಗಿ ಪಾಲಿಸುತ್ತಿದೆ ಮತ್ತು ಕೈಗೊಳ್ಳುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ