Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಇಂಡಿಗೋ ಫ್ಲೈಟ್‌ಗೆ ಬಾಂಬ್ ಬೆದರಿಕೆ ಕರೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕ

ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಚೀಟಿ ಪತ್ತೆ
ಬೆಂಗಳೂರಿನಿಂದ ದೆಹಲಿಗೆ ತೆರಳಬೇಕಿದ್ದ ಇಂಡಿಗೋ ಫ್ಲೈಟ್‌ನಲ್ಲಿ ಆತಂಕ
ಪರಿಶೀಲನೆ ಬಳಿಕ ಹುಸಿ ಬಾಂಬ್ ಬೆದರಿಕೆ ಎಂದು ಖಚಿತ

ಬೆಂಗಳೂರು: ಶನಿವಾರ (ಏ.4) ಸಂಜೆ ಬೆಂಗಳೂರಿನಿಂದ ದೆಹಲಿಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಶೌಚಾಲಯದೊಳಗೆ ಬಾಂಬ್ ಬೆದರಿಕೆ ಚೀಟಿ ಪತ್ತೆಯಾಗಿದ್ದು, ಪ್ರಯಾಣದಲ್ಲಿ ವಿಳಂಬ ಉಂಟಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕನೊಬ್ಬ ಶೌಚಾಲಯ ಬಳಸುವ ವೇಳೆ ಈ ಚೀಟಿಯನ್ನು ಗಮನಿಸಿದ್ದು, ಕ್ಷಣಾರ್ಧದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಇದು ಹುಸಿ ಬಾಂಬ್ ಬೆದರಿಕೆ!
ಚೀಟಿ ಪತ್ತೆಯಾದ ತಕ್ಷಣವೇ ವಿಮಾನ ನಿಲ್ದಾಣ ಸಿಬ್ಬಂದಿ ಎಚ್ಚರಗೊಂಡು, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ಪ್ರತ್ಯೇಕವಾಗಿ ತಪಾಸಣೆ ನಡೆಸಿದರು. ವಿಮಾನದ ಪ್ರಯಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಂಪೂರ್ಣ ಶೋಧ ಕಾರ್ಯ ಕೈಗೊಳ್ಳಲಾಯಿತು. ಬಳಿಕ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿತು.

ಹುಸಿ ಬೆದರಿಕೆ ಪ್ರಕರಣ: ಮೈಸೂರಿನ ವ್ಯಕ್ತಿ ಬಂಧನ
ಇತ್ತೀಚೆಗೆ ನೂರಾರು ಶಾಲೆಗಳು, ವಿಮಾನ ನಿಲ್ದಾಣಗಳು, ಆಸ್ಪತ್ರೆಗಳು ಮತ್ತು ನ್ಯಾಯಾಲಯಗಳಿಗೆ ಸುಮಾರು 1,100ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ ನೀಡಿದ ಪ್ರಕರಣದಲ್ಲಿ ಮೈಸೂರಿನ ಶ್ರೀನಿವಾಸ್ ಲೂಯಿಸ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈತನಿಂದ ದೆಹಲಿ ಹೈಕೋರ್ಟ್‌ಗೆ ಕೂಡ ಬೆದರಿಕೆ ಬಂದಿದ್ದು, ತನಿಖೆ ನಡೆಸಿದ ಪೊಲೀಸರು ಸ್ಥಳೀಯರ ಸಹಕಾರದಿಂದ ಶನಿವಾರ (ಏ.4) ಮೈಸೂರಿನಲ್ಲಿ ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆತನೇ ಈ ಎಲ್ಲಾ ಹುಸಿ ಬೆದರಿಕೆಗಳಿಗೆ ಕಾರಣ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ