LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BREAKING : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್ - ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ. ವಂಚನೆ ಪ್ರಕರಣದಲ್ಲಿ ಅವರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದರು.

ತನಿಖೆ ಹಾಗೂ ದೂರಿನ ಆಧಾರದಲ್ಲಿ ಆನಂತರ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಈ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು” ಎಂದು ನ್ಯಾಯಾಲಯ ಆದೇಶಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

5 ಕೋಟಿಗೆ ಬೇಡಿಕೆ ಇಟ್ಟಿದ್ದ ಗೋಪಾಲ್ ಜೋಶಿ. ಆದರೆ ದೇವಾನಂದ ದಂಪತಿ 5 ಕೋಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾಗ 2 ಕೋಟಿ ರೂಪಾಯಿ ಹಣ ಪಡೆದಿದ್ದರು. 2 ಕೋಟಿ ಹಣಪಡೆದು ಟಿಕೆಟ್ ನೀಡದೇ ವಂಚಿಸಿದ್ದೂ ಅಲ್ಲದೇ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸುನೀತಾ ಚೌವ್ಹಾಣ್ ನೀಡಿದ ದೂರಿನ ಹಿನ್ನೆಲೆ ಗೋಪಾಲ್ ಜೋಶಿ, ಅವರ ಮಗ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!