Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BREAKING : ಪಡಿತರದಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 'E-KYC' ಆ್ಯಪ್ ಬಿಡುಗಡೆ

ಬೆಂಗಳೂರು: ರೇಷನ್ ಕಾರ್ಡ್‌ದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದೊಡ್ಡ ಸಿಹಿ ಸುದ್ದಿ ನೀಡಿದೆ. ಇ-ಕೆವೈಸಿ (E-KYC) ಪ್ರಕ್ರಿಯೆಯನ್ನು ಸುಲಭ ಹಾಗೂ ಫಟಾಫಟ್ ಆಗಿ ಪೂರ್ಣಗೊಳಿಸಲು ‘ಅನ್ನಸೇವೆ’ ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಆಪ್ ಮೂಲಕ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲದೇ, ಮನೆಯಲ್ಲೇ ಕುಳಿತು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ.

ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಚಾಲನೆ: ಶೀಘ್ರದಲ್ಲೇ ರಾಜ್ಯಾದ್ಯಂತ ವಿಸ್ತರಣೆ ಪ್ರಸ್ತುತ ಈ ಆಪ್ ಅನ್ನು ಪ್ರಾಯೋಗಿಕವಾಗಿ ಎಂಟು ಜಿಲ್ಲೆಗಳಲ್ಲಿ ಲಾಂಚ್ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಕಾರವಾರ, ಬಳ್ಳಾರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳ ಸಾರ್ವಜನಿಕರು ಈ ಸೇವೆಯ ಪ್ರಯೋಜನ ಪಡೆಯಬಹುದು. ಇನ್ನು 20 ದಿನಗಳ ನಂತರ ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ಈ ಅಪ್ಲಿಕೇಶನ್ ಅಧಿಕೃತವಾಗಿ ಲಭ್ಯವಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಸರ್ವರ್ ಸಮಸ್ಯೆಗೆ ಮುಕ್ತಿ ನೀಡಲು ತಾಂತ್ರಿಕ ಹೆಜ್ಜೆ ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ಇ-ಕೆವೈಸಿ ನವೀಕರಣ ಕಾರ್ಯ ನಡೆಯುತ್ತಿದೆಯಾದರೂ, ಸರ್ವರ್ ಸಮಸ್ಯೆಯಿಂದಾಗಿ ಜನರು ಪರದಾಡುವಂತಾಗಿತ್ತು. ಈ ಬಗ್ಗೆ ಮಾತನಾಡಿದ ಸಚಿವ ರಿಜ್ವಾನ್ ಅರ್ಷದ್, "ರಾಜ್ಯದಲ್ಲಿ ಒಟ್ಟು ನಾಲ್ಕುವರೆ ಕೋಟಿ ಫಲಾನುಭವಿಗಳಿದ್ದು, ಪ್ರತಿಯೊಬ್ಬರಿಗೂ ಸರಿಯಾದ ರೀತಿಯಲ್ಲಿ ಸೇವೆ ತಲುಪಿಸುವುದು ನಮ್ಮ ಕರ್ತವ್ಯ. ಸರ್ವರ್ ಸಮಸ್ಯೆ ಬಗೆಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಹೊಸ ಆಪ್ ಮೂಲಕ ಪ್ರಕ್ರಿಯೆ ಸರಳವಾಗಲಿದೆ" ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು-ರಾಮೇಶ್ವರಂ ನಡುವೆ ವಿಶೇಷ ರೈಲುಗಳ ಸಂಚಾರ15 ದಿನದೊಳಗೆ ಗ್ರಾಮ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ 'ಗ್ಯಾರಂಟಿ ಸಮಿತಿ ರಚನೆ'ಗೆ ಸರ್ಕಾರ ಖಡಕ್ ಆದೇಶತಿರುಮಲದ ಕರ್ನಾಟಕ ಪ್ರವಾಸಿ ಸೌಧ ನಿರ್ವಹಣೆ KSTDCಗೆ: ಸಚಿವ ಕೆ.ಜೆ. ಜಾರ್ಜ್ವಿಶೇಷಚೇತನರ ಮಾಸಾಶನವನ್ನು 5,000 ರೂ.ಗೆ ಏರಿಕೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ‘ಆಕ್ಟಿವ್ ಕರ್ನಾಟಕ’ ಮೂಲಕ ಕ್ರೀಡೆ–ಪ್ರವಾಸೋದ್ಯಮ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸುವುದೇ ನನ್ನ ಗುರಿ: ಸಚಿವ ಟಿ.ರಘುಮೂರ್ತಿBIG BREAKING: ತಾವು ಕರ್ತವ್ಯ ನಿರ್ವಹಿಸುವ 'ಕೇಂದ್ರ ಸ್ಥಾನ'ಗಳಲ್ಲೇ 'ಅಧಿಕಾರಿ, ಸಿಬ್ಬಂದಿ ವಾಸ' ಕಡ್ಡಾಯ: ರಾಜ್ಯ ಸರ್ಕಾರ ಆದೇಶಚುನಾವಣಾ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮತBREAKING: ರಾಜ್ಯ ಸಚಿವ ಸಂಪುಟ ಸಭೆ ದಿಢೀರ್ ರದ್ದು, ಚುನಾವಣಾ ಆಯೋಗ ಮುಂದೆ ಸಿಎಂ ಸೇರಿ ಸಚವರು ಧರಣಿBREAKING: ಫಾರ್ಮ್-7 ಸಲ್ಲಿಕೆ ಅಕ್ರಮ: ಚು.ಆಯೋಗದ ಕಚೇರಿ ಎದುರು ಸಿಎಂ ಡಿ.ಕೆ. ಶಿವಕುಮಾರ್, ಸಚಿವರು ಧರಣಿ ಪ್ರತಿಭಟನೆ