ಬೆಂಗಳೂರು : ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಮನೆಗೆ ನುಗ್ಗಿ ಹಣೆಗೆ ಗುಂಡಿಟ್ಟು ವಕೀಲನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಂದೂರು ಅಗ್ರಹಾರದಲ್ಲಿ ಈ ಒಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ನಿನ್ನೆ ರಾತ್ರಿ 11:30 ಸುಮಾರಿಗೆ ವಕೀಲ ಮಂಜುನಾಥ ನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಮಧ್ಯರಾತ್ರಿ ಮಂಜುನಾಥ ಮನೆ ಬಾಗಿಲು ಬಡೆದಿದ್ದ ದುಷ್ಕರ್ಮಿಗಳು ಬಾಗಿಲು ಓಪನ್ ಮಾಡುತ್ತಿದ್ದಂತೆ ಮಂಜುನಾಥ ಹಣೆಗೆ ಗುಂಡಿಟ್ಟು ಕೊಲೆ ಮಾಡಿದ್ದಾರೆ ವೃತ್ತಿಯಲ್ಲಿ ಮಂಜುನಾಥ್ ವಕೀಲನಾಗಿದ್ದು ಕೋಟಿಗಟ್ಟಲೆ ಆಸ್ತಿ ಹೊಂದಿದ್ದ ವೈಟ್ ಫೀಲ್ಡ್ ಭಾಗದಲ್ಲಿ ಮಂಜುನಾಥ್ ಹತ್ತಾರು ಎಕರೆ ಜಮೀನು ಹೊಂದಿದ್ದ.
ಅಲ್ಲದೇ ಜಮೀನನ್ನು ಶೆಡ್ಗೆ ಬಾಡಿಗೆಗೆ ನೀಡುತ್ತಿದ್ದ ಕೊನೆಗೂ ಒಂದು ಗಂಟೆ ಮುನ್ನ ಬಾಡಿಗೆ ವಿಚಾರಕ್ಕೆ ಗಲಾಟೆ ನಡೆದಿತ್ತು ನೀಡದೆ ವಿಚಾರಕ್ಕೆ ಬಾಡಿಗೆದಾರರ ಜೊತೆ ಗಲಾಟೆ ಆಗಿತ್ತು ಗಲಾಟೆಯ ನಂತರ ಈ ದುಷ್ಕೃತ್ಯ ನಡೆದಿದೆ. ಘಟನೆ ಕುರಿತಂತೆ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.