ಬಳ್ಳಾರಿ : ಬಳ್ಳಾರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ನಗರದ ಮಿಲ್ಲರ್ ಪೇಟೆ ಕಾಲುವೆ ಬಳಿ ಈ ಒಂದು ದುರಂತ ಸಂಭವಿಸಿದೆ.
ತನ್ನ ಇಬ್ಬರು ಮಕ್ಕಳಾದ ಮೊಹಮ್ಮದ್ ಅಯಾನ್ (3) ಮತ್ತು ಆಯಿಷ ಫಾತಿಮಾ (2) ಜೊತೆಗೆ ತಾಯಿ ಲತಿಫಾ ಸಿಮ್ರಾನ್ (29) ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳ ಜೊತೆಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಲುವೆಯಲ್ಲಿ ತಾಯಿ ಲತಿಫಾ ಸಿಮ್ರಾನ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ಮುಂದುವರೆದಿದೆ. ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ