ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ (Operation) ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿವೆ. ಇದರ ಬೆನ್ನಲ್ಲೇ, ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಸ್ಟಿಂಗ್ ಆಪರೇಷನ್ ಬೆನ್ನಲ್ಲೇ ಮೀಟಿಂಗ್ ಮೇಲೆ ಮೀಟಿಂಗ್ ನಡೆಯುತ್ತಿದ್ದು ಸಿದ್ದರಾಮಯ್ಯ ಅವರನ್ನು ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿಯಾಗುವ ಸಾಧ್ಯತೆ ಇದೆ. ಸ್ಟಿಂಗ್ ಆಪರೇಷನ್ ಚರ್ಚೆಯ ಹೊತ್ತಿನಲ್ಲಿ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಒಂದು ಭೇಟಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಅವರ ಜೊತೆಗೆ ಡಿಕೆ ಶಿವಕುಮಾರ್ ಫೋನ್ ಮೂಲಕ ಮಾತನಾಡಿದ್ದಾರೆ.
ಒಂದು ವಾರದಿಂದ ನಿರಂತರ ಕಾರ್ಯ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ ಕಾರಣದಿಂದಲೂ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ ಬಳಿಕ ಬೇರೆ ಕೆಲಸದ ಒತ್ತಡದಲ್ಲಿ ಇದ್ದರು ಹಾಗಾಗಿ ಫೋನಲ್ಲಿಯೇ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ್ದು ಇದೀಗ ಯಾವುದೇ ಕ್ಷಣದಲ್ಲಿ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.