Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

BREAKING: ಸಾಗರ, ಹೊಸನಗರ ಸೇರಿದಂತೆ 9 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು:  ಖಾರಿಫ್ 2026ರ ಮುಂಗಾರು ಹಂಗಾಮಿನಲ್ಲಿ ತಲೆದೋರಿರುವ ಮಳೆ ಕೊರತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಹೆಚ್ಚುವರಿಯಾಗಿ ಸಾಗರ, ಹೊಸನಗರ ಸೇರಿದಂತೆ 9 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಘೋಷಿಸಿದೆ.

ಬರ ನಿರ್ವಹಣಾ ಕೈಪಿಡಿ-2020ರ ಮಾನದಂಡಗಳ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ) ಕಾರ್ಯದರ್ಶಿ ಹಾಗೂ ಪರಿಹಾರ ಆಯುಕ್ತರಾದ ಮನೋಜ್ ಕುಮಾರ್ ಮೀನಾ ಅವರು ಅಕ್ಟೋಬರ್ 14 ರಂದು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ. 

ಈ ಘೋಷಣೆಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆರು ತಿಂಗಳ ಕಾಲ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರಲಿದೆ.

​ವೈಜ್ಞಾನಿಕ ಸಮೀಕ್ಷೆ ಮತ್ತು ತಾಲೂಕುಗಳ ವರ್ಗೀಕರಣ

​ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನಡೆಸಿದ ವೈಜ್ಞಾನಿಕ ಮೌಲ್ಯಮಾಪನ ಹಾಗೂ 9 ತಾಲೂಕುಗಳ 108 ಹಳ್ಳಿಗಳಲ್ಲಿ ಮೊಬೈಲ್ ಆ್ಯಪ್ ಮೂಲಕ ನಡೆಸಲಾದ ಸ್ಥಳ ಪರಿಶೀಲನೆಯ (ಗ್ರೌಂಡ್ ಟ್ರೂಥಿಂಗ್) ಆಧಾರದ ಮೇಲೆ ಈ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಹೊಸದಾಗಿ ಘೋಷಿಸಲಾದ 9 ತಾಲೂಕುಗಳಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕನ್ನು 'ತೀವ್ರ ಬರಪೀಡಿತ' ಎಂದು ಗುರುತಿಸಲಾಗಿದೆ.

ಉಳಿದಂತೆ ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಹಾಗೂ ಮುಲ್ಕಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸೂಪಾ (ಜೋಯಿಡಾ) ಹಾಗೂ ದಾಂಡೇಲಿ ತಾಲೂಕುಗಳನ್ನು 'ಮಧ್ಯಮ ಬರಪೀಡಿತ' ಎಂದು ವರ್ಗೀಕರಿಸಲಾಗಿದೆ.

​ಹಂತ-ಹಂತವಾಗಿ ಬರ ಘೋಷಣೆ

​ಸರ್ಕಾರವು ಮುಂಗಾರು ಹಂಗಾಮಿನ ಅವಧಿಯಲ್ಲಿ ನಿರಂತರವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಾ ಬಂದಿದೆ. ಮೊದಲ ಹಂತದಲ್ಲಿ 101 ತಾಲೂಕುಗಳನ್ನು, ಎರಡನೇ ಹಂತದಲ್ಲಿ 23 ತಾಲೂಕುಗಳನ್ನು, ಮೂರನೇ ಹಂತದಲ್ಲಿ 53 ತಾಲೂಕುಗಳನ್ನು ಹಾಗೂ ನಾಲ್ಕನೇ ಹಂತದಲ್ಲಿ 40 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಈಗಾಗಲೇ ಪ್ರಕಟಿಸಿತ್ತು. ಇದೀಗ ಐದನೇ ಹಂತದ ಮೌಲ್ಯಮಾಪನದ ನಂತರ ಹೆಚ್ಚುವರಿಯಾಗಿ 9 ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ.

​ಪರಿಹಾರ ಕಾಮಗಾರಿ ಹಾಗೂ ಬೆಳೆ ಹಾನಿ ಜಂಟಿ ಸಮೀಕ್ಷೆಗೆ ಆದೇಶ

​ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್ (SDRF) ನಿಯಮಾವಳಿಗಳ ಪ್ರಕಾರ ಅಗತ್ಯ ಪರಿಹಾರ ಕಾಮಗಾರಿಗಳು ಹಾಗೂ ತುರ್ತು ಸ್ಪಂದನಾ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಇದಲ್ಲದೆ, ಕೃಷಿ ಆಯುಕ್ತರು, ತೋಟಗಾರಿಕೆ ನಿರ್ದೇಶಕರು ಮತ್ತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಈ ತಾಲೂಕುಗಳಲ್ಲಿ ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ, ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

news_1791967879_0_417.webp

 

news_1791967879_1_641.webp

 

news_1791967880_2_714.webp

 

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ibl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯ ಹಿತ್ತಲಲ್ಲಿ ಬೃಹತ್ ಹೆಬ್ಬಾವು ಪತ್ತೆ | WATCH VIDEOರಷ್ಯಾ ಸೇನೆಗೆ ಸೇರಿದ ಭಾರತೀಯರೆಷ್ಟು? ಎಷ್ಟು ಮಂದಿ ಸಾವು, ಎಷ್ಟು ಜನ ನಾಪತ್ತೆ? ಸುಪ್ರೀಂಕೋರ್ಟ್‌ಗೆ ಕೇಂದ್ರದ ಮಾಹಿತಿಭಾರತದಲ್ಲಿ CJP ಪ್ರತಿಭಟನೆಗೆ ಅಮೆರಿಕದಿಂದ ಹಣಕಾಸು ನೆರವು ? ಗಾಯಕಿ ಮೇರಿ ಮಿಲ್ಬೆನ್‌ ಗಂಭೀರ ಆರೋಪ!ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆಕಬ್ಬು ಬೆಳೆಗಾರರ ಬೇಡಿಕೆ ಪರಿಶೀಲನೆಗೆ ಕೇಂದ್ರದ ಮಹತ್ವದ ಕ್ರಮ: ರಮೇಶ್ ಚಂದ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆಹಬ್ಬದ ಹೊತ್ತಲ್ಲೇ ರೈಲ್ವೆ ನೌಕರರಿಗೆ ಬಂಪರ್ ಕೊಡುಗೆ: 78 ದಿನಗಳ ಬೋನಸ್ ಗೆ ಮೋದಿ ಸಂಪುಟ ಅನುಮೋದನೆದೇಶವನ್ನೇ ಬೆಚ್ಚಿಬೀಳಿಸಿದ್ದ ಮೀರತ್ ‘ನೀಲಿ ಡ್ರಮ್ ಹತ್ಯೆ ಪ್ರಕರಣ’: ಪತ್ನಿ, ಪ್ರಿಯಕರನಿಗೆ ಮರಣದಂಡನೆಕರ್ನಾಟಕದಲ್ಲಿ ಹಿಂಗಾರು ಮಳೆ ನಿರೀಕ್ಷೆ: ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚಿನ ಎಚ್ಚರಿಕೆ; IMD ಮುನ್ಸೂಚನೆ ಏನು?15,000 ಲಂಚ ಪಡೆಯುತ್ತಿದ್ದಾಗಲೇ ಹೆಸ್ಕಾಂ ಅಧಿಕಾರಿ, ಗುತ್ತಿಗೆದಾರ ಲೋಕಾಯುಕ್ತ ಬಲೆಗೆBREAKING: ಜೆಡಿಎಸ್ ಸೋಶಿಯಲ್ ಮೀಡಿಯಾ ತಂಡದ ಯುವಕ ಪೊಲೀಸರು ವಶಕ್ಕೆ: HDK ಕಿಡಿ