ಬೆಂಗಳೂರು : ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ನಡೆದಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ನಿರ್ವಹಿಸುವ ಹುಡುಗರಿಗೆ ಪೊಲೀಸರು ಅನಗತ್ಯವಾಗಿ ತೊಂದರೆ ನೀಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಧೈರ್ಯವಿದ್ದರೆ ನೇರವಾಗಿ ನನ್ನನ್ನೇ ತನಿಖೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಈ ಸಂದರ್ಭದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಸುಮಾರು 30 ನಿಮಿಷಗಳವರೆಗೆ ಚರ್ಚೆ ನಡೆಸಿದ್ದಾರೆ. ಬಳಿಕ ಕಮಿಷನರ್ ಕಚೇರಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಧರಣಿ ಕುಳಿತುಕೊಂಡರು. ತನಿಖೆ ಮಾಡುವವರೆಗೂ ನಾನು ಕಚೇರಿಯಲ್ಲಿ ಧರಣಿಗೆ ಕುಳಿತುಕೊಳ್ಳುತ್ತೇನೆ ತನಿಖೆ ಮಾಡುವುದಾದರೆ ನನ್ನನ್ನೇ ತನಿಖೆ ಮಾಡಲಿ, ಪೊಲೀಸ್ನವರು ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ನಮ್ಮ ಸಾಮಾಜಿಕ ಜಾಲತಾಣದ ಹುಡುಗರಿಗೆ ತೊಂದರೆಯಾಗುತ್ತಿದೆ ಎಂದು ಕಿಡಿ ಕಾರಿದ್ದು, ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಧರಣಿ ಕುಳಿತುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.