ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಸವಾಡಿಯಲ್ಲಿ ಕಾಂಪೌಂಡ್ ಕುಸಿದು ಅಪ್ರಾಪ್ತ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಚಿಕ್ಕ ಬಾಣಸವಾಡಿಯಲ್ಲಿ ನಿನ್ನೆ ನಡೆದಿದೆ. ಕಾಂಪೌಂಡ್ ಗೋಡೆ ಕುಸಿದು 17 ವರ್ಷದ ಭೀಮೇಶ್ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಪೌಂಡ್ ಕೆಳಗೆ ಮಣ್ಣು ತೆಗೆಯುತ್ತಿದ್ದಾಗ ದುರಂತ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಜೊತೆಗೆ ಭೀಮೇಶ್ ತೆರಳಿದ್ದ. ಮಣ್ಣು ತೆಗೆಯುತ್ತಿದ್ದಾಗ 4 ಅಡಿ ಎತ್ತರದ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದಿದೆ. ದುರಂತದಲ್ಲಿ ಭೀಮೇಶ್ ಸಾವನ್ನುಪ್ಪಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.