ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲಾಗಿ ಡಾಕ್ಟರ್ ಸುಧಾ ಯಾದವ್ ಇಂದು ಪ್ರಮಾಣವಚನ ಸ್ವೀಕರಿಸಿದರು ಅವರಿಗೆ ಹೈಕೋರ್ಟ್ ಸಿಜೆ ವಿಭು ಭಕ್ರು ಪ್ರಮಾಣ ವಚನ ಬೋಧಿಸಿದರು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಈ ಒಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು.
ಈ ಒಂದು ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ಥಾವರ ಚೆಂದ ಗೆಹ್ಲೋಟ, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹೈಕೋರ್ಟ್ ಸಿಜೆ ವಿಭು ಭಕ್ರು, ಉಪಮುಖ್ಯಮಂತ್ರಿ ಜಿ ಪರಮೇಶ್ವರ್, ವಿಪಕ್ಷ ನಾಯಕ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.