ನಟ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಚಿತ್ರಕ್ಕೆ ಪೈರಸಿ ಕಾಟ ಎದುರಾಗಿದ್ದು, ಸಿನಿಮಾ ಬಿಡುಗಡೆಗೂ ಮುನ್ನವೇ ಅದರ ದೃಶ್ಯಗಳನ್ನು ಲೀಕ್ ಮಾಡಿದ ಆರೋಪದ ಮೇಲೆ ಸೈಬರ್ ಕ್ರೈಂ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.
ಕೆವಿಎನ್ (KVN) ಪ್ರೊಡಕ್ಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದ ದೃಶ್ಯಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದವು. ಈ ಬಗ್ಗೆ ಗಂಭೀರ ಕ್ರಮ ಕೈಗೊಂಡ ಪೊಲೀಸರು ಈಗಾಗಲೇ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಲೀಕ್ ಆದ ದೃಶ್ಯಗಳನ್ನು ಡೌನ್‌ಲೋಡ್ ಮಾಡುವುದು, ವಾಟ್ಸಾಪ್, ಟೆಲಿಗ್ರಾಮ್ ಅಥವಾ ಇತರ ಸಾಮಾಜಿಕ ಜಾಲತಾಣಗಳಲ್ಲಿ ಫಾರ್ವರ್ಡ್ ಮಾಡುವುದು ಅಪರಾಧವಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಚಿತ್ರತಂಡದ ಕಾನೂನು ಸಲಹೆಗಾರರು ಎಚ್ಚರಿಸಿದ್ದಾರೆ.
ಚಿತ್ರತಂಡದ ಆಕ್ರೋಶ: ನೂರಾರು ಕೋಟಿ ಹೂಡಿಕೆ ಮಾಡಿರುವ ಇಂತಹ ದೊಡ್ಡ ಚಿತ್ರದ ದೃಶ್ಯಗಳನ್ನು ಕಳುವು ಮಾಡುವುದು ಚಿತ್ರೋದ್ಯಮಕ್ಕೆ ದೊಡ್ಡ ಹೊಡೆತ ನೀಡುತ್ತದೆ. ಆದ್ದರಿಂದ ಪೈರಸಿಯನ್ನು ಪ್ರೋತ್ಸಾಹಿಸದಂತೆ ನಿರ್ಮಾಣ ಸಂಸ್ಥೆ ಪ್ರೇಕ್ಷಕರಲ್ಲಿ ಮನವಿ ಮಾಡಿದೆ.
ಅಭಿಮಾನಿಗಳ ಬೇಸರ: ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸುತ್ತಿರುವ ಈ ಮಹತ್ವದ ಹಂತದಲ್ಲಿ ಸಿನಿಮಾ ಲೀಕ್ ಆಗಿರುವುದು ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಹಲವು ಚಿತ್ರರಂಗದ ಗಣ್ಯರು ಈ ಪೈರಸಿ ಕೃತ್ಯವನ್ನು ಖಂಡಿಸಿದ್ದಾರೆ. ಎಚ್. ವಿನೋದ್ ನಿರ್ದೇಶನದ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದು, ಭಾರಿ ನಿರೀಕ್ಷೆ ಮೂಡಿಸಿದೆ.