ಕಲಬುರ್ಗಿ : ಇತ್ತೀಚಿಗೆ ಪಾಕಿಸ್ತಾನ ಜೊತೆಗೆ ನಂಟು ಹೊಂದಿದ್ದ ಶಂಕಿತನನ್ನ ಬೀದರ್ನಲ್ಲಿ ಅರೆಸ್ಟ್ ಮಾಡಲಾಗಿತ್ತು. ಇದೀಗ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಕಲ್ಬುರ್ಗಿಯಲ್ಲಿ ಓರ್ವ ಶಂಕಿತ ವ್ಯಕ್ತಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ಮತ್ತು ಸ್ಥಳೀಯ ಪೊಲೀಸ್ರು ಕಾರ್ಯಚರಣೆ ನಡೆಸಿ, ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ ವುಲ್ ಮಲಿಕ್ ಎಂಬತನನ್ನ ವಶಕ್ಕೆ ಪಡೆದಿದ್ದಾರೆ.
ಲಷ್ಕರ್ ಎ ತೈಬಾ ಉಗ್ರ ಸಂಘಟನೆ ಜೊತೆಗೆ ಈತ ಸಂಪರ್ಕ ಹೊಂದಿದ್ದ ಎನ್ನಲಾಗಿದ್ದು ಕಲ್ಬುರ್ಗಿಯ ಸರಾಫ್ ಬಜಾರ್ ನಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದ ಸಹೋದರನೊಂದಿಗೆ ಚಿನ್ನಾಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸಂಘಟನೆಗಳ ಜೊತೆಗೆ ಸಂಪರ್ಕ ಹೊಂದಿದ್ದ ಹಲವು ಮಹತ್ವದ ವಿಷಯಗಳನ್ನು ಮೆಸೇಜ್ ಮೂಲಕ ಹಂಚಿಕೊಂಡಿದ್ದ ಎನ್ನಲಾಗಿದ್ದು, ಇದೀಗ ಆತನನ್ನು ಅರೆಸ್ಟ್ ಮಾಡಲಾಗಿದೆ.