ಬೆಂಗಳೂರು: ಬೆಂಗಳೂರಿನ ಚಿಕ್ಕಜಾಲದಲ್ಲಿ ಹಿಟ್ ಅಂಡ್ ರನ್ ಗೆ ವ್ಯಕ್ತಿ ಬಲಿಯಾಗಿದ್ದಾರೆ. ಬೈಕ್ ಗೆ ಕಾರ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದಾರೆ.
ಮಹೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಪತ್ನಿ ಹಾಗೂ ಪುತ್ರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಮತ್ತು ಪುತ್ರಿ ಜತೆ ಬೈಕ್ ನಲ್ಲಿ ಮಹೇಶ್ ತೆರಳುವಾಗ ಕಾರ್ ಡಿಕ್ಕಿಯಾಗಿದೆ. ಚಿಕ್ಕಜಾಲ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.