ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯವರನ್ನು ಯುವತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದೂರಿನ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ತಕ್ಷಣವೇ ಎಫ್ಐಆರ್ ದಾಖಲಿಸಿಕೊಂಡು ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧಿತ ಸ್ವಾಮೀಜಿಯನ್ನು ಪೊಲೀಸ್ ಠಾಣೆಗೆ ಕರೆತಂದು, ಈ ಕುರಿತು ಹೆಚ್ಚಿನ ತನಿಖೆ ಮತ್ತು ವಿಚಾರಣೆಯನ್ನು ಮುಂದುವರಿಸಿದ್ದಾರೆ.