ನವದೆಹಲಿ: ತಿರಂಗ ಯಾತ್ರೆಯ ಸಂದರ್ಭದಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆದುಕೊಳ್ಳಲಾಗಿದ್ದ AISA ಅಧ್ಯಕ್ಷೆ ನೇಹಾ ಬೋರಾ ಅವರನ್ನು ಈಗ ಬಿಡುಗಡೆ ಮಾಡಲಾಗಿದೆ. ನಿನ್ನೆ ನಡೆದ ತಿರಂಗ ಯಾತ್ರೆ ವೇಳೆ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಘಟನೆಯನ್ನು ಖಂಡಿಸಿ ಹಲವು ಪ್ರತಿಭಟನಾಕಾರರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸಾರ್ವಜನಿಕ ಹಾಗೂ ರಾಜಕೀಯ ವಲಯದಿಂದ ಹೆಚ್ಚಾದ ಪ್ರತಿಭಟನೆ ಮತ್ತು ಆಕ್ರೋಶದ ಹಿನ್ನೆಲೆಯಲ್ಲಿ ಎಚ್ಚೆತ್ತ ದೆಹಲಿ ಪೊಲೀಸರು, ಕೊನೆಗೂ ನೇಹಾ ಬೋರಾ ಅವರನ್ನು ಬಿಡುಗಡೆಗೊಳಿಸಿದ್ದಾರೆ.