BREAKING NEWS : ಮುಡಾ ಕುರಿತು ಆಕ್ಷೇಪಾರ್ಹ ಹೇಳಿಕೆ - ಸಚಿವ ಜಮೀರ್ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಸೂಚನೆ
ಬೆಂಗಳೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರು ಸೂಚನೆ ನೀಡಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದಿದ್ದ ಸಚಿವರಿಗೆ ಸಂಕಷ್ಟ ಎದುರಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.