BREAKING NEWS: ಸಿದ್ದರಾಮಯ್ಯಗೆ ಮತ್ತೊಂದು ಹಿನ್ನಡೆ - ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಿಎಂ ವಿರುದ್ಧ ತನಿಖೆಗೆ ಆದೇಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಹಿನ್ನಡೆ ಉಂಟಾಗಿದೆ. ಜನಪ್ರತಿನಿಧಿಗಳ ಕೋರ್ಟ್ ನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಮೈಸೂರು ಲೋಕಾಯುಕ್ತರಿಂದ ತನಿಖೆಗೆ ಆದೇಶಿಸಿದ್ದು, 6 ವಾರಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ಕೋರ್ಟ್ ಆದೇಶಿಸಿದೆ. ಮುಡಾ ಪ್ರಕರಣದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಖಾಸಗಿ ದೂರುಗಳ ಬಗ್ಗೆ ಇಂದು ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್, ಮುಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿರುವುದರಿಂದ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ತನಿಖೆಗೆ ಆದೇಶಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.