Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
India

BREAKING : ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್‌ : ದಾಖಲೆ ಸಲ್ಲಿಸುವಂತೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಕಾನೂನುಬಾಹಿರತೆ ಹಾಗೂ ಶಾಸನಬದ್ಧ ‘ಫಾರ್ಮ್ 6’ ಬದಲಾವಣೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಚುನಾವಣಾ ಆಯೋಗಕ್ಕೆ (ECI) ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ಈ ವಿಚಾರಣೆ ನಡೆಸಿದ್ದು, ಮಾಧ್ಯಮ ವರದಿಗಳ ಆಧಾರದ ಮೇಲೆ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಅಮಾನತುಗೊಳಿಸಲು ಅಥವಾ ಯಾವುದೇ ರೀತಿಯ ಮಧ್ಯಂತರ ತಡೆಯಾಜ್ಞೆ ನೀಡಲು ಸ್ಪಷ್ಟವಾಗಿ ನಿರಾಕರಿಸಿದೆ. ಆದರೆ, ವಿವಾದಿತ ನಿರ್ಧಾರಗಳಿಗೆ ಸಂಬಂಧಿಸಿದ ಎಲ್ಲಾ ಮೂಲ ಕಡತ ಹಾಗೂ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶ ನೀಡಿದೆ.

ಚುನಾವಣಾ ಆಯೋಗವು ಬಹು-ಸದಸ್ಯ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಇಬ್ಬರು ಚುನಾವಣಾ ಆಯುಕ್ತರ ಸಮ್ಮತಿ ಇಲ್ಲದೆ ಸಿಇಸಿ ಏಕಪಕ್ಷೀಯವಾಗಿ ಪ್ರಮುಖ ತೀರ್ಮಾನಗಳನ್ನು ಕೈಗೊಂಡಿದ್ದಾರೆ ಎಂದು ಅರ್ಜಿಯಲ್ಲಿ ಗಂಭೀರವಾಗಿ ಆರೋಪಿಸಲಾಗಿದೆ. ಈ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯಕಾಂತ್, "ದಾಖಲೆಗಳು ನ್ಯಾಯಾಲಯದ ಮುಂದೆ ಬಂದಾಗ, ಮತದಾರರ ನೋಂದಣಿಗೆ ಬಳಸುವ ‘ಫಾರ್ಮ್ 6’ ಅನ್ನು ಯಾರು ಬದಲಾಯಿಸಿದರು ಎಂಬುದನ್ನು ನಾವು ಪರಿಶೀಲಿಸಲಿದ್ದೇವೆ. ಈ ತೀರ್ಮಾನಗಳನ್ನು ಕೇವಲ ಮುಖ್ಯ ಚುನಾವಣಾ ಆಯುಕ್ತರು ಒಬ್ಬರೇ ತೆಗೆದುಕೊಂಡಿದ್ದಾರೆಯೇ ಅಥವಾ ಆಯೋಗದ ಸರ್ವಾನುಮತ ಅಥವಾ ಬಹುಮತದಿಂದ ಅಂಗೀಕರಿಸಲಾಗಿದೆಯೇ ಎಂಬುದನ್ನು ತಿಳಿಯಬೇಕಿದೆ. ನೋಟಿಸ್ ನಂತರ, ನಿರ್ಧಾರಗಳನ್ನು ಒಮ್ಮತವಿಲ್ಲದೆ ತೆಗೆದುಕೊಳ್ಳಲಾಗಿದೆ ಎಂದು ಕಂಡುಬಂದರೆ, ಅಂತಹ ನಿರ್ಧಾರಗಳನ್ನು ನ್ಯಾಯಾಲಯ ಹಿಂಪಡೆಯಲಿದೆ" ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಮೇನಕಾ ಗುರುಸ್ವಾಮಿ, "ಇದು ರಾಷ್ಟ್ರೀಯ ಸಾಂವಿಧಾನಿಕ ಸಂಸ್ಥೆಯೊಂದರ ಕಾರ್ಯವೈಖರಿಗೆ ಸಂಬಂಧಿಸಿದ ಅತ್ಯಂತ ಗಂಭೀರ ಪ್ರಶ್ನೆಯಾಗಿದೆ. ನಾವು ಈ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನೋಡಿ ಬೆಳೆದಿದ್ದೇವೆ, ಆದರೆ ಪ್ರಸ್ತುತ ಅಂತಹ ವಾತಾವರಣ ಉಳಿದಿಲ್ಲ," ಎಂದು ತೀವ್ರ ಕಳವಳ ವ್ಯಕ್ತಪಡಿಸಿ, ಸಿಇಸಿ ನಡವಳಿಕೆಯನ್ನು ಪ್ರಶ್ನಿಸಿರುವ ಮನವಿಯನ್ನು ಬಲವಾಗಿ ಸಮರ್ಥಿಸಿಕೊಂಡರು.

ವಕೀಲರ ವಾದಕ್ಕೆ ಆಲಿಸಿದ ಸಿಜೆಐ ಸೂರ್ಯಕಾಂತ್ ಅವರು, "ನಾವು ಕೂಡ ನಮ್ಮ ಹೋಂವರ್ಕ್ ಮಾಡಿಕೊಂಡೇ ಬಂದಿದ್ದೇವೆ, ಪ್ರಕರಣದ ಆಳ-ಅಗಲ ನಮಗೂ ತಿಳಿದಿದೆ" ಎಂದು ಹೇಳುವ ಮೂಲಕ ಪ್ರಕರಣದ ಪ್ರತಿಯೊಂದು ಅಂಶವನ್ನೂ ನ್ಯಾಯಾಲಯ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!