ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಠಾಣೆಯ ಪಿಎಸ್ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಎಸ್ಐ ತಿಪ್ಪೇಶ್ ಪತ್ನಿ ಪದ್ಮಾ(39) ನೇಣಿಗೆ ಶರಣಾಗಿದ್ದಾರೆ. ಬೀರೂರು ಪಟ್ಟಣದ ರಾಜಾಜಿನಗರದ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ.
ತಿಪ್ಪೇಶ್ ಕರ್ತವ್ಯ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. 13 ವರ್ಷದ ಹಿಂದೆ ತಿಪ್ಪೇಶ್ ಮತ್ತು ಪದ್ಮಾ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.