ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಸದ್ಯ ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಅಧಿಕೃತ ಮಾಹಿತಿ ನೀಡಿದ್ದಾರೆ. ವೈದ್ಯರ ನಿರಂತರ ಮೇಲ್ವಿಚಾರಣೆಯಲ್ಲಿ ಅವರಿಗೆ ಅಗತ್ಯ ಚಿಕಿತ್ಸೆ ಮುಂದುವರಿದಿದೆ.