ಹಿಮಾಚಲ್ ಪ್ರದೇಶ : ಬೆಳಗಿನ ಜಾವ ಶಿಮ್ಲಾ ಜಿಲ್ಲೆಯಲ್ಲಿ 4.1 ತೀವ್ರತೆಯ ಮಧ್ಯಮ ಭೂಕಂಪ ಸಂಭವಿಸಿದ್ದು, ಹಿಮಾಚಲ ಪ್ರದೇಶದ ರಾಜಧಾನಿಯಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ರಾಂಪುರ ಪ್ರದೇಶದಲ್ಲಿ ಕಂಪನದ ಅನುಭವವಾಗಿದೆ ಎಂದು ದತ್ತಾಂಶಗಳು ತಿಳಿಸಿವೆ.
ಬೆಳಿಗ್ಗೆ 4:36 ರ ಸುಮಾರಿಗೆ ಕೆಲವು ಸೆಕೆಂಡುಗಳ ಕಾಲ ಕಂಪನದ ಅನುಭವವಾಯಿತು. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರವು ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಆಳದಲ್ಲಿತ್ತು.ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್ಡಿಎಂಎ) ತಿಳಿಸಿದೆ.