ರಾಮನಗರ: ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಅಮನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಸಿಇಎನ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ. ಕಗ್ಗಲಿಪುರ ಮೂಲದ ಕಿರಣ್ ಕುಮಾರ್, ಆದಿತ್ಯ ಬಂಧಿತ ಆರೋಪಿಗಳು.
ಆರೋಪಿಗಳು ರೆಸಾರ್ಟ್ ವೊಂದರಲ್ಲಿ ಈಜುಕೊಳ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದರು. ಕುರಿಗಾಹಿ ಬಾಲಕಿಯರನ್ನು ಪರಿಚಯಿಸಿಕೊಂಡು ಕಿರುಕುಳ ನೀಡುತ್ತಿದ್ದರು. ಅಲ್ಲದೇ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡು ಅವುಗಳನ್ನು ಆನ್ ಲೈನ್ ಗೆ ಅಪ್ ಲೋಡ್ ಮಾಡಿದ್ದರು.
ಆನ್ ಲೈನ್ ನಲ್ಲಿ ವಿಡಿಯೋ ವೈರಲ್ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.