Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಂದು ಸ್ತನ ಕ್ಯಾನ್ಸರ್ ಜಾಗೃತಿ: ರಾಗಾಆವಿವಿ ವಿನೂತನ ಹೆಜ್ಜೆ

ರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿ

ಹಸಿರು ಕ್ರಾಂತಿ ವರದಿ ಬೆಂಗಳೂರು
ಸ್ತನ ಕ್ಯಾನ್ಸರ್ ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವತಿಯರು ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ತನ ಕ್ಯಾನ್ಸರ್‌ನ ಆರಂಭಿಕ ಪತ್ತೆ, ಸಕಾಲಿಕ ಚಿಕಿತ್ಸೆ ಹಾಗೂ ಮಹಿಳೆಯರ ಆರೋಗ್ಯದ ಮಹತ್ವ ಸಾರಲು ಅ.29 ರಂದು ಬೆಂಗಳೂರಿನ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಗುಲಾಬಿ ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲು ಉದ್ದೇಶಿಸಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಗಾಆವಿವಿ) ಕುಲಪತಿ ಡಾ.ಭಗವಾನ್ ಬಿ.ಸಿ ಹೇಳಿದರು.

ಜಯನಗರದ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ತನ ಕ್ಯಾನ್ಸರ್ ಜಾಗೃತಿಯ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದು ವಿಶ್ವವಿದ್ಯಾಲಯದ ಆಶಯವಾಗಿದ್ದು, ವಿನೂತನ ಉಪಕ್ರಮಕ್ಕೆ ಮುಂದಾಗಿದೆ. ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ವಿಧಾನಸೌಧ, ಹಡ್ಸನ್ ವೃತ್ತದಲ್ಲಿರುವ ಟೌನ್‌ಹಾಲ್, ಕಬ್ಬನ್ ಪಾರ್ಕ್‌ನಲ್ಲಿರುವ ಸರ್ ಶೇಷಾದ್ರಿ ಅಯ್ಯರ್ ಸ್ಮಾರಕ ಗ್ರಂಥಾಲಯ ಹಾಗೂ ರಾಜ್ಯ ವಸ್ತುಸಂಗ್ರಹಾಲಯಗಳಿಗೆ ಪಿಂಕ್ ಲೈಟಿಂಗ್ ಮಾಡಲು ಪ್ರಸ್ತಾವಿಸಲಾಗಿದೆ. ಸಲ್ಲಿಸಿದ ಈ ಪ್ರಸ್ತಾವನೆಗೆ ಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್ ಹಾಗೂ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

ಮಹಿಳೆಯರ ಆರೋಗ್ಯ ಸಂರಕ್ಷಣೆ ಮತ್ತು ತಡೆಗಟ್ಟಬಹುದಾದ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸುವ ತನ್ನ ಬದ್ಧತೆಯ ಭಾಗವಾಗಿ ರಾಗಾಆವಿವಿ ಈ ಉಪಕ್ರಮವನ್ನು ಕೈಗೊಂಡಿದೆ. ಜಾಗೃತಿ, ಆರಂಭಿಕ ಪತ್ತೆ ಮತ್ತು ಸಕಾಲಿಕ ಚಿಕಿತ್ಸೆ-ಸ್ತನ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜೀವ ಉಳಿಸುವ ಪ್ರಮುಖ ಹೆಜ್ಜೆಗಳು ಎಂಬ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.

ಜಾಗೃತಿ ಮೂಡಿಸಲು ಮುಂದಾದ ವಿಶ್ವವಿದ್ಯಾಲಯ: ಪ್ರತಿ ವರ್ಷ ಅಕ್ಟೋಬರ್ ತಿಂಗಳನ್ನು ಸ್ತನ ಕ್ಯಾನ್ಸರ್ ಜಾಗೃತಿ ಮಾಸವನ್ನಾಗಿ ಆಚರಿಸಲಾಗುತ್ತದೆ. ಜಾಗತಿಕವಾಗಿ ಮಹಿಳೆಯರಲ್ಲಿ ಪ್ರಮುಖವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಸ್ತನ ಕ್ಯಾನ್ಸರ್ ಕೂಡ ಒಂದಾಗಿದೆ. ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಚಿಕಿತ್ಸೆಯ ಫಲಿತಾಂಶಗಳನ್ನು ಸುಧಾರಿಸಲು ಹಾಗೂ ಜೀವಗಳನ್ನು ಉಳಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರ ಗಮನ ಸೆಳೆಯುವ ಪಿಂಕ್ ಲೈಟಿಂಗ್ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ವಿಶ್ವವಿದ್ಯಾಲಯ ಮುಂದಾಗಿದೆ ಎಂದು ವಿವರಿಸಿದರು.

ಸಂಯೋಜಿತ ಕಾಲೇಜುಗಳಲ್ಲಿ ಜಾಗೃತಿ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಹಾಗೂ ಇತರ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವವಿದ್ಯಾಲಯದ ಎಲ್ಲ ಸಂಯೋಜಿತ ಕಾಲೇಜುಗಳಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಸ್ತನಗಳಲ್ಲಿ ಕಂಡುಬರುವ ಅಸಹಜ ಬದಲಾವಣೆಗಳನ್ನು ಗುರುತಿಸುವುದು, ವೈದ್ಯಕೀಯ ಸಲಹೆ ಪಡೆಯುವುದು, ಸೂಕ್ತ ತಪಾಸಣೆ ಹಾಗೂ ಆರಂಭಿಕ ಪತ್ತೆಯ ಮಹತ್ವದ ಕುರಿತು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದು ತಿಳಿಸಿದರು.

ಪಿಂಕ್ ಲೈಟಿಂಗ್ ಕೇವಲ ಕಟ್ಟಡಗಳ ಅಲಂಕಾರಕ್ಕೆ ಸೀಮಿತವಾಗದೇ ಸ್ತನ ಕ್ಯಾನ್ಸರ್ ಕುರಿತು ಮುಕ್ತವಾಗಿ ಮಾತನಾಡಲು, ಆರೋಗ್ಯದ ಬಗ್ಗೆ ಜಾಗೃತರಾಗಿರಲು ಮತ್ತು ಅಗತ್ಯವಿದ್ದಾಗ ವೈದ್ಯಕೀಯ ನೆರವು ಪಡೆಯಲು ಪ್ರೇರೇಪಿಸುವ ಸಂಕೇತವಾಗಬೇಕು ಎಂಬುವುದು ವಿಶ್ವವಿದ್ಯಾಲಯದ ಆಶಯವಾಗಿದೆ.
-ಡಾ.ಭಗವಾನ್ ಬಿ.ಸಿ, ಕುಲಪತಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಗಾಆವಿವಿ).

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ