Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬ್ರಿಕ್ಸ್ ಯಾರ ವಿರುದ್ಧವೂ ಅಲ್ಲ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ವೇದಿಕೆ: ಮೋದಿ

ಹೊಸದಿಲ್ಲಿ, ಸೆ 12 : (ಸಮದರ್ಶಿ ಸುದ್ದಿ) - ಜಗತ್ತು ಹಲವು ಗಂಭೀರ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಬ್ರಿಕ್ಸ್ ರಾಷ್ಟ್ರಗಳು ಕೇವಲ ಜಾಗತಿಕ ನಿಯಮಗಳನ್ನು ಪಾಲಿಸುವ ರಾಷ್ಟ್ರಗಳಾಗಿ ಉಳಿಯದೆ, ನಿಯಮಗಳನ್ನು ರೂಪಿಸುವ ಶಕ್ತಿಯಾಗಿ ಹೊರಹೊಮ್ಮಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ ತನ್ನದೇ ಆದ ವಿಶಿಷ್ಟ ಗುರುತನ್ನು ಹೊಂದಿದೆ. ಈ ಒಕ್ಕೂಟ ಯಾವುದೇ ದೇಶ ಅಥವಾ ಗುಂಪಿನ ವಿರುದ್ಧ ರೂಪುಗೊಂಡಿಲ್ಲ. ಪರಸ್ಪರ ಗೌರವ ಮತ್ತು ಸಹಕಾರದೊಂದಿಗೆ ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವುದೇ ಇದರ ಉದ್ದೇಶ ಎಂದು ಹೇಳಿದರು.

ಪ್ರಸ್ತುತ ಜಾಗತಿಕ ಆಡಳಿತ ವ್ಯವಸ್ಥೆ ಪಿರಮಿಡ್‌ನಂತಿದೆ. ಅಧಿಕಾರ ಮತ್ತು ಪ್ರಮುಖ ನಿರ್ಧಾರಗಳನ್ನು ಕೆಲವೇ ಪ್ರಬಲ ರಾಷ್ಟ್ರಗಳು ಹಾಗೂ ಸಂಸ್ಥೆಗಳು ಕೈಗೊಳ್ಳುತ್ತಿದ್ದು, ಅದರ ಪರಿಣಾಮಗಳನ್ನು ಅಭಿವೃದ್ಧಿಶೀಲ ಮತ್ತು ಸಣ್ಣ ರಾಷ್ಟ್ರಗಳು ಎದುರಿಸುತ್ತಿವೆ. ಈ ‘ಸವಲತ್ತುಗಳ ಪಿರಮಿಡ್’ ವ್ಯವಸ್ಥೆಯನ್ನು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ‘ಪಾಲುದಾರಿಕೆಯ ವೇದಿಕೆ’ಯಾಗಿ ಪರಿವರ್ತಿಸಬೇಕಾಗಿದೆ ಎಂದು ಪ್ರತಿಪಾದಿಸಿದರು.

ಜಾಗತಿಕ ಬಿಕ್ಕಟ್ಟುಗಳನ್ನು ಎದುರಿಸುವಲ್ಲಿ ಬ್ರಿಕ್ಸ್ ರಾಷ್ಟ್ರಗಳು ಮುಂಚೂಣಿಯಲ್ಲಿದ್ದರೂ, ಜಾಗತಿಕ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಅವುಗಳಿಗೆ ತಕ್ಕಷ್ಟು ಅವಕಾಶ ದೊರೆತಿಲ್ಲ. ಪ್ರತಿಯೊಂದು ರಾಷ್ಟ್ರದ ಧ್ವನಿಗೂ ಮಹತ್ವ ಸಿಗುವ ವ್ಯವಸ್ಥೆಯನ್ನು ನಿರ್ಮಿಸುವುದು ಅಗತ್ಯ ಎಂದು ಮೋದಿ ಹೇಳಿದರು.

ಜಾಗತಿಕ ಆಡಳಿತ ವ್ಯವಸ್ಥೆಯ ಸುಧಾರಣೆಗಾಗಿ ಬ್ರಿಕ್ಸ್ ರಾಷ್ಟ್ರಗಳು ಜಂಟಿಯಾಗಿ 10 ಪ್ರಮುಖ ಪ್ರಸ್ತಾವನೆಗಳನ್ನು ಸಿದ್ಧಪಡಿಸಬೇಕು. ಮುಂದಿನ ಶೃಂಗಸಭೆಯ ವೇಳೆಗೆ ಅವುಗಳನ್ನು ‘ಬ್ರಿಕ್ಸ್ ಸುಧಾರಣಾ ಮಾರ್ಗಸೂಚಿ’ಯಾಗಿ ರೂಪಿಸುವ ಗುರಿ ಹೊಂದಬೇಕು ಎಂದು ಮೋದಿ ಪ್ರಸ್ತಾಪಿಸಿದರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಯನ್ನೂ ಇನ್ನಷ್ಟು ವಿಳಂಬ ಮಾಡಬಾರದು. ಬದಲಾದ ಜಾಗತಿಕ ಪರಿಸ್ಥಿತಿಗೆ ಅನುಗುಣವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಸೂಕ್ತ ಪ್ರಾತಿನಿಧ್ಯ ದೊರೆಯುವಂತೆ ತಕ್ಷಣ ಸುಧಾರಣೆ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ, ಮಲೇಷಿಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹಾಗೂ ಇಂಡೋನೇಷಿಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸೇರಿದಂತೆ ವಿವಿಧ ರಾಷ್ಟ್ರಗಳ ನಾಯಕರು ಭಾಗವಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ