LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರ ಉರುಳಿಸುವುದು ಎಚ್ ಡಿಕೆ ಹಗಲುಗನಸು: ಎಂ ಬಿ ಪಾಟೀಲ

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಎಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಲೇವಡಿ ಮಾಡಿದ್ದಾರೆ.

ಶನಿವಾರ ತಮ್ಮ‌ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ.

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದು ಅವರು ಪ್ರತಿಪಾದಿಸಿದರು.ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಅವರು ವಿವರಿಸಿದರು.

ಪ್ರಜ್ವಲ್ವ ರೇವಣ್ಣನವರ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ. ಸದ್ಯಕ್ಕೆ ನಡೆಯುತ್ತಿರುವ ಎಸ್ಐಟಿ ತನಿಖೆ ಬಗ್ಗೆ ಓರ್ವ ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸುವುದಿಲ್ಲ. ಎಸ್ಐಟಿ ತನ್ನ‌ ಕೆಲಸ ಮಾಡಲಿದೆ ಎಂದು ಪಾಟೀಲ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ