Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಎಂದು ಘೋಷಣೆ ಮಾಡಿ ಬಿಎಸ್ವೈ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಯೋಗೇಶ್ವರ್, ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು ಇವರ ಮಧ್ಯ ಉಪಚುನಾವಣೆ ರಂಗೇರಿದೆ.

ಎರಡು ದಿನ ಬಾಕಿ ಇರುವಂತೆ ದಿಢೀರ್ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಾರಿದ ಯೋಗೇಶ್ವರ್ ಕ್ರಮದಿಂದಾಗಿ ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಹೆಸರು ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್  ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ.

ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್ ಹೆಸರು ಘೋಷಣೆ ಮಾಡಲಾಯಿತು.

ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಕಳೆದ ಹಲವು ದಿನಗಳಿಂದ ಗೊಂದಲವಾಗಿ ಮಾರ್ಪಟ್ಟಿದ್ದ ಅಭ್ಯರ್ಥಿ ಆಯ್ಕೆ ಸಂಬಂಧ, ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.  ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.

ಜೆಡಿಎಸ್ ಮತ್ತು ಬಿಜೆಪಿ ನಾಯಕರ ಸಮನ್ವಯ ಸಭೆಗೂ ಮೊದಲೇ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿಯೇ ಚನ್ನಪಟ್ಟಣದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡರು ಜೆಡಿಎಸ್ ಸಭೆ ಬಳಿಕ ಮಾತನಾಡಿ, ನಿಖಿಲ್ ಅಭ್ಯರ್ಥಿಯಾಗಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಬೇಕೆಂದು ನಿಖಿಲ್ ಹೇಳಿದ್ದರು. ಇಂದು ಮತ್ತೆ ಕಾರ್ಯಕರ್ತರು ಬಂದು ನಿಖಿಲ್ ಸ್ಪರ್ಧೆಗೆ ಆಗ್ರಹಿಸಿದರು. ಹೀಗಾಗಿ ನಿಖಿಲ್ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಚನ್ನಪಟ್ಟಣ ಅಭ್ಯರ್ಥಿಯಾಗಿ ಶುಕ್ರವಾರ ನಿಖಿಲ್ ನಾಮಪತ್ರ ಸಲ್ಲಿಸುತ್ತಾರೆ. ಇದರಲ್ಲಿ ನಾನು ಸಹ ಭಾಗಿಯಾಗುತ್ತೇನೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

 ಎಂಪಿ, ಎಂಎಲ್ಎ ಚುನಾವಣೆಯಲ್ಲಿ ನಿಖಿಲ್ ಸೋಲು ಕಂಡಿದ್ದರು, ಉಪ ಚುನಾವಣೆಯಲ್ಲಿ ಅವರ ಭವಿಷ್ಯ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.



 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ