LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡ್ತಿರೋದು ಯತ್ನಾಳ್‌ಗೆ ಶೋಭೆ ತರಲ್ಲ'- ಬಿಎಸ್‌ವೈ

ಬೆಂಗಳೂರು : ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಬಸನಗೌಡ ಪಾಟೀಲ್ ಯತ್ನಾಳ್ ತಂಡದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೇಸರ ಹೊರಹಾಕಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡರು. ಆದರೆ, ಅವರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರಲ್ಲ. ಈಗಲಾದರೂ ಜಾಗೃತರಾಗಿ, ಅವರೆಲ್ಲರೂ ಸೇರಿ ಪಕ್ಷವನ್ನು ಬಲಪಡಿಸಲು ಸಹಕಾರ ಕೊಡಬೇಕೆಂದು ನಾನು ವಿನಂತಿಸುತ್ತೇನೆ. ನಾವು ಮನವಿ ಮಾಡುತ್ತೇವೆ. ಆದರೆ ಉಳಿದದ್ದು ಅವರಿಗೆ, ಕೇಂದ್ರ ನಾಯಕರಿಗೆ ಬಿಟ್ಟಿದ್ದು. ಇದೆಲ್ಲ ಹೈಕಮಾಂಡ್ ಗಮನಕ್ಕೂ ಬಂದಿದೆ. ಏನು ಮಾಡುತ್ತಾರೆ ನೋಡೋಣ ಎಂದ ಅವರು ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಕೇಳಿಕೊಂಡರು.

ಉಪಚುನಾವಣಾ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು ಕೊರತೆ ಆಗಿದೆ ಎನ್ನುವ ಕುರಿತು ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ಇನ್ನೂ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಸೇರಿ ಜವಾಬ್ದಾರಿ ಹೊರಬೇಕಾಗುತ್ತದೆ. ಏನು ಲೋಪ ಆಗಿದೆ ಎಂದು ಚರ್ಚಿಸುತ್ತೇವೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಎಸ್ಸಿ. ಪದವಿ ಪಠ್ಯದಲ್ಲಿ ಸಾಹಿತಿ ಡಾ.ಬಿ.ಎಲ್.ವೇಣುರವರ ಕಥೆ ಸೇರ್ಪಡೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 05-08-2025.!!ಪುತ್ರದಾ ಏಕಾದಶಿ ದಿನ ದಂಪತಿಗಳು ಹೀಗೆ ಮಾಡಿದರೆ ಸಂತಾನ ಪ್ರಾಪ್ತಿ.!ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ'ದೇಶದಲ್ಲಿ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್ ಪಕ್ಷ'- ವಿಜಯೇಂದ್ರ ಆಕ್ಷೇಪ'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿ