LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ  ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

 

ಚಿತ್ರದುರ್ಗ: ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.

17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.

ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026