ಮಾರ್ಚ್ 6ರಿಂದ 27 ರವರೆಗೆ ಬಜೆಟ್ ಅಧಿವೇಶನ ಸಿಎಂ ಅವರ 17ನೇ ಬಜೆಟ್.!
ಬೆಂಗಳೂರು: ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಮಾರ್ಚ್ 6ರಿಂದ 27 ರವರೆಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಬಜೆಟ್ ಮಂಡಿಸಲಿದ್ದಾರೆ.
ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾರ್ಚ್ 6ರಿಂದ 27ರವರೆಗೆ ಒಟ್ಟು 14 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾಹಿತಿ ನೀಡಿ, ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್ 6ರಂದು ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.