ಸಿರುಗುಪ್ಪ: ನಗರದ ಹೊರವಲಯದಲ್ಲಿರುವ ಶ್ರೀಮತಿ ದಿ. ಹೊನ್ನೂರಮ್ಮ ದಿ. ಶ್ರೀ ಎಂ. ಸಿದ್ದಪ್ಪ ಪ್ರಥಮ ದರ್ಜೆ ಕಾಲೇಜು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
[video width="478" height="850" mp4="https://vijayanagaravani.com/wp-content/uploads/2026/01/WhatsApp-Video-2026-01-27-at-4.21.17-PM.mp4"][/video]
ತಾಲ್ಲೂಕಿನ ಕುರುವಳ್ಳಿ ಗ್ರಾಮದ ಶಿವಲಿಂಗಮ್ಮ (20) ಹಾಗೂ ಡಿಪ್ಲೋಮಾ ವಿದ್ಯಾರ್ಥಿ ಅಭಿ (22) ಸಿರುಗುಪ್ಪದಿಂದ ಬಳ್ಳಾರಿ ಮಾರ್ಗವಾಗಿ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.