LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು

ಜಾರ್ಖಂಡ್ ನ ದಿಯೋಘರ್ ನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.

ದಿಯೋಘರ್‌ನ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಮುನಿಯಾ ಅರಣ್ಯದ ಬಳಿ ಮಂಗಳವಾರ ಮುಂಜಾನೆ 4.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. 32 ಸೀಟುಗಳ ಬಸ್ ಕನ್ವಾರಿಯಾಗಳು ಪ್ರಯಾಣಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ (ದುಮ್ಕಾ ವಲಯ) ಶೈಲೇಂದ್ರ ಕುಮಾರ್ ಸಿನ್ಹಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಆದಾಗ್ಯೂ, ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಂಚಾರ ವಿಭಾಗದ ಉಪ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ್ ಪ್ರಸಾದ್ ತಿಳಿಸಿದ್ದಾರೆ.

ಈ ಮಧ್ಯೆ ಈ ಪ್ರದೇಶದ ಸಂಸದ ನಿಶಿಕಾಂತ್ ದುಬೆ, ಶ್ರಾವಣ ಮಾಸದ ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಬಸ್ ಮತ್ತು ಟ್ರಕ್ ಅಪಘಾತದಲ್ಲಿ 18 ಭಕ್ತರು ಪ್ರಾಣ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಸದ್ಯ ಮೃತದೇಹಗಳನ್ನು ದಿಯೋಘರ್ ಸದರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರ ಪ್ರಕಾರ, 20 ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026