LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೂ.19ಕ್ಕೆ ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ನವದೆಹಲಿ : ಗುಜರಾತ್ ಕೇರಳ , ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಗುಜರಾತ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಜೂನ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಗುಜರಾತ್‌ನಲ್ಲಿ ಹಾಲಿ ಶಾಸಕ ಕರ್ಸನ್‌ಭಾಯ್ ಪಂಜಾಬಿ ಸೋಲಂಕಿ ನಿಧನದ ಬಳಿಕ ಕಾಡಿ ಕ್ಷೇತ್ರದ ಸ್ಥಾನ ತೆರವಾಗಿತ್ತು. ಅಲ್ಲದೇ ವಿಶಾವದರ್ ಕ್ಷೇತ್ರದಲ್ಲಿ ಭಯಾನಿ ಭೂಪೇಂದ್ರಭಾಯ್ ಗಂಡುಭಾಯ್ ಅವರ ರಾಜೀನಾಮೆಯಿಂದಾಗಿ ಆ ಕ್ಷೇತ್ರದ ಸ್ಥಾನ ತೆರವಾಗಿತ್ತು

ಕೇರಳದ ನಿಲಂಬೂರ್ ಕ್ಷೇತ್ರದಲ್ಲಿ ಪಿ.ವಿ ಅನ್ವರ್ ರಾಜೀನಾಮೆಯಿಂದ ಉಪಚುನಾವಣೆ ನಡೆಯಲಿದೆ. ಪಂಜಾಬ್‌ನ ಲುಧಿಯಾನ ಕ್ಷೇತ್ರದಲ್ಲಿ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು. ಪಶ್ಚಿಮ ಬಂಗಾಳದ ಕಾಳಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ನಾಸಿರುದ್ದೀನ್ ಅಹಮದ್ ಅವರ ನಿಧನದಿಂದ ಉಪಚುನಾವಣೆ ಅನಿವಾರ್ಯವಾಗಿದೆ. ಈ ಎಲ್ಲಾ ಕ್ಷೇತ್ರಗಳಲ್ಲೂ ಜೂ.19ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026