ಸ್ಥಳೀಯ ಸಂಸ್ಥೆಗಳ ಉಪಚುನಾವಣೆ: ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ
ಚಿತ್ರದುರ್ಗ: ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಘೋಷಿಸಿದ್ದು, ಮತದಾನ ದಿನದಂದು ಇದೇ ನ.23ರಂದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.
ಜಿಲ್ಲೆಯ ಚಿತ್ರದುರ್ಗ ನಗರಸಭೆ 15ನೇ ವಾರ್ಡ್, ಚಳ್ಳಕೆರೆ ನಗರಸಭೆ 4ನೇ ವಾರ್ಡ್ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯತಿ 1ನೇ ವಾರ್ಡ್‍ನಲ್ಲಿ ಸ್ಥಳೀಯ ಮತದಾನ ನಡೆಯಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ದಿನದಂದು ಸ್ಥಳೀಯ ಸಂಸ್ಥೆಗಳಲ್ಲಿ ಬರುವ ಕಾರ್ಖಾನೆಗಳು, ಗಾರ್ಮೆಂಟ್ ಪ್ಯಾಕ್ಟರಿಗಳಲ್ಲಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಎಲ್ಲಾ ಉದ್ಯೋಗದಾತರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.