Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಸಿ. ಇ.ಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ 

ಬಳ್ಳಾರಿ. ಸೆ. 29 : ಸಂವಿಧಾನದ ಪ್ರಕಾರ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕಾದ ಚುನಾವಣಾ ಆಯೋಗ ಇಂದು ಮತಗಳ್ಳತನದ ಆರೋಪವನ್ನು ಎದುರಿಸುತ್ತಿದೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಜ್ಞಾನೇಶ್ ಕುಮಾರ್ ಚುನಾವಣಾ ಅಕ್ರಮಗಳಿಗೆ ನೇರ ಹೊಣೆಗಾರರಾಗಿದ್ದು ಕೂಡಲೇ ಅವರು ರಾಜೀನಾಮೆ ನೀಡಬೇಕೆಂದು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಆಗ್ರಹಿಸಿದರು.
 ಈ ಕುರಿತು ಸೋಮವಾರದಂದು  ನಗರದ ರಾಯಲ್ ಸರ್ಕಲ್ ನಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ  ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಜ್ಞಾನೇಶ್ ಕುಮಾರ್  ಕೇಂದ್ರ ಚುನಾವಣಾ ಆಯೋಗ ಸಾಯುತ್ತ ಸಂಸ್ಥೆಯ ಕಮಿಷನರ್ ಆಗಿದ್ದು ಅವರು ಯಾವುದೋ ಒಂದು ಪಕ್ಷದ  ಪರವಾಗಿ ಕೆಲಸ ಮಾಡಬಾರದು, ಆದರೂ ಅವರು ಅಮಿಷಗಳಿಗೆ ಒಳಗಾಗಿ ಭಾರತೀಯ ಜನತಾ ಪಕ್ಷದ ಪರವಾಗಿ ಚುನಾವಣ ಆಯೋಗದಲ್ಲಿ ಕುಳಿತು ಕೆಲಸ ಮಾಡುತ್ತಿದ್ದಾರೆ ಇದು ಸಂವಿಧಾನ ಬಾಹಿರವಾಗಿದ್ದು ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
 ಎ. ಮಾನಯ್ಯ ಮಾತನಾಡಿ  ಎಸ್ಐಆರ್ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಆಣತಿಯ ಮೇರೆಗೆ  ಚುನಾವಣಾ ಆಯೋಗ ಬೇಕಾಬಿಟ್ಟಿ ಮತದಾರರನ್ನು ಕೈಬಿಟ್ಟಿರುತ್ತದೆ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು.
ರಾಯಲ್ ಸರ್ಕಲ್ ನಲ್ಲಿ  ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು 
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವಿಷ್ಣು ಭೋಯಪಾಟಿ, ಮುಖಂಡರಾದ ವಿಕೆ ಬಸಪ್ಪ, ಮುಂಡರಿಗಿ ನಾಗರಾಜ್,  ರಾಮ್ ಪ್ರಸಾದ್  ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಈರನಗೌಡ, ಹುಮಯುನ್ ಖಾನ್,  ಪಾಲಿಕೆ ಸದಸ್ಯರಾದ ವಿಕ್ಕಿ, ವೆಂಕಟೇಶ್ ಹೆಗಡೆ, ಅಖಿಲ್ ಅಹಮ್ಮದ್, ಸಮೀರ್, ಅಸುಂಡಿ ನಾಗರಾಜ್, ಅಸುಂಡಿ ಹನುಮೇಶ್ ಸೇರಿದಂತೆ ಹಲವಾರು ಜನ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ