LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮನುಷ್ಯ ದ್ವೇಷಿ ಇಂಥಾ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ' ಸಿ.ಎಂ ಕರೆ

ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.‌

ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಬಡ ಕುಟುಂಬಗಳಿಗೆ ಧರ್ಮ ಸಂಸ್ಥೆ ನೀಡಿದ ಉಚಿತ ಮನೆಗಳನ್ನು ಹಸ್ತಾಂತರಿಸಿ ಮಾತನಾಡಿದರು.ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು.

ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.

ನಮ್ಮ ಧರ್ಮವನ್ನು ಪಾಲಿಸೋಣ. ಎಲ್ಲ ಧರ್ಮಗಳನ್ನೂ ಸಹಿಸಿಕೊಳ್ಳುವ ಸಹಿಷ್ಣುತೆ ಬೆಳೆಸಿಕೊಳ್ಳಿ ಎನ್ನುವುದೇ ನಮ್ಮ‌ ಸಂವಿಧಾನದ ಮಹಾನ್ ಮೌಲ್ಯ. ಇದನ್ನು ಪಾಲಿಸುವುದೇ ನಾವು ಸ್ವಾಮಿ ವಿವೇಕಾನಂದರಿಗೆ, ಸಂವಿಧಾನಕ್ಕೆ ನೀಡುವ ಮಹೋನ್ನತ ಗೌರವ ಎಂದರು.

ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ. ನಾನು ಹಿಂದುಗಳನ್ನು ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ವಿವರಿಸಿದರು.

ಹಿಂದುಳಿದವರು, ಅಲ್ಪಸಂಖ್ಯಾತರು, ಶೂದ್ರರು, ದಲಿತರು ಮತ್ತು ಇಡೀ ಮಹಿಳಾ ಕುಲವನ್ನು ಈ ಜಾತಿ ವ್ಯವಸ್ಥೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿತ್ತು. ಆದರೆ, ನಮ್ಮ ಸಂವಿಧಾನ ಇವರೆಲ್ಲರನ್ನೂ ಜಾತಿ ಸಂಕೋಲೆಯಿಂದ ಬಿಡುಗಡೆಗೊಳಿಸಿ ಶಿಕ್ಷಣ ಒದಗಿಸಿತು ಎಂದರು.

ನಾನು ವೀರಮಕ್ಕಳ ಕುಣಿತಕ್ಕೆ ಸೇರಿ ಶಿಕ್ಷಣದಿಂದ ವಂಚಿತನಾಗಿದ್ದೆ. ಆದರೆ ನಮ್ಮ ಸಂವಿಧಾನ ಮತ್ತು ಒಬ್ಬ ಗುರುಗಳ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಯಿಂದ ಶಿಕ್ಷಣ ಪಡೆದೆ. ಪರಿಣಾಮ ನಾನು ಎರಡೆರಡು ಬಾರಿ ಮುಖ್ಯಮಂತ್ರಿ ಆದೆ ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆ ಇವನಾರವ ಎನ್ನಬೇಡಿ, ಇವ ನಮ್ಮವ ಎನ್ನಿ ಎಂದು ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿದ್ದರು. ಆದರೆ, ಇವತ್ತಿಗೂ ಜಾತಿ ಹೋಗಿಲ್ಲ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆಸತತ ಮೂರು ಪ್ರಯತ್ನಗಳ ನಂತರ ಯುಪಿಎಸ್‌ಸಿ ಪರೀಕ್ಷೆ ಪಾಸಾದ ರಿಯಾ ಸೈನಿಕಾಲ್ತುಳಿತ ಕೇಸ್: ಅಮಾನತು ಆದೇಶ ಹಿಂಪಡೆದ ಬೇನ್ನಲ್ಲೇ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆಮಂಗಳೂರಿನಲ್ಲಿ NIA ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಗಳಿಂದ ಗ್ರೀನ್ ಸಿಗ್ನಲ್: ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ)ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ .! 01-08-2025ನಿಮ್ಮ ಮನೆಯಲ್ಲಿ ಈ ಲಕ್ಷಣಗಳಿದ್ದರೆ ಕೆಟ್ಟ ದೃಷ್ಟಿ- ವಾಸ್ತುದೋಷ ಇದೆ ಎಂದರ್ಥ!ವಚನ: --ದಸರಯ್ಯ .!ಧರ್ಮಸ್ಥಳ: ಮಾಧ್ಯಮಗಳು ಬಿತ್ತರಿಸುತ್ತಿರುವ ಸುದ್ದಿಗಳು ಸತ್ಯಾನ.?ಕೇದಾರನಾಥ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ- 800 ಯಾತ್ರಿಕರ ರಕ್ಷಣೆ