LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧನಸಹಾಯಕ್ಕೆ ಅರ್ಜಿ ಆಹ್ವಾನ..!

 

ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿ.30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು  Sevasindhu.karnataka.gov.in ಮುಖಾಂತರ ಡಿ.01 ರಿಂದ 30 ರವೆರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್  www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08024410547/ 8792662814/ 8792662816/ 08022213530/ 9986837037/ 9900337738/ 9448436877/ 9480197511/ 9916600027/ 08022241325 ಅನ್ನು ಸಂಪರ್ಕಿಸಬಹುದಾಗಿದೆ.

ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026