LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಚನ ಕಲ್ಯಾಣ' ನಾಟಕ ಪ್ರದರ್ಶನಕ್ಕೆ ಕಲಾವಿದರ ಆಯ್ಕೆ: ಅರ್ಜಿ ಆಹ್ವಾನ


ಬಳ್ಳಾರಿ,ಮಾ.12

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ‘ವಚನ ಕಲ್ಯಾಣ' ಎಂಬ ಬೃಹತ್ ನಾಟಕವನ್ನು ಸಿದ್ಧಪಡಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಉದ್ದೇಶಿಸಿದ್ದು, ಈ ನಾಟಕದಲ್ಲಿ ಅಭಿನಯಿಸಲು ಆಸಕ್ತಿಯುಳ್ಳ ನುರಿತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.

ಅರ್ಹತೆ:

18 ರಿಂದ 40 ವರ್ಷದೊಳಗಿನ ಮಹಿಳೆ ಮತ್ತು ಪುರುಷ ಕಲಾವಿದರು ಅರ್ಜಿ ಸಲ್ಲಿಸಬಹುದು. ಅಭಿನಯದಲ್ಲಿ ತರಬೇತಿ ಪಡೆದವರಿಗೆ ಹಾಗೂ ರಂಗಭೂಮಿಯಲ್ಲಿ ಅನುಭವ ಇರುವ ಕಲಾವಿದರಿಗೆ ಮೊದಲ ಆದ್ಯತೆ ನೀಡಲಾಗುವುದು.

ಆಯ್ಕೆಯಾದ ಅಭಿನಯಾರ್ಥಿಗಳು ಮೂರು ತಿಂಗಳ ಕಾಲ ಪೂರ್ಣಾವಧಿಯಾಗಿ ತರಬೇತಿ ಮತ್ತು ಪ್ರದರ್ಶನಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ಆಯ್ಕೆಯಾದ ಕಲಾವಿದರಿಗೆ ಮಾಸಿಕ ಗೌರವಧನ ಹಾಗೂ ಊಟ-ವಸತಿ ವ್ಯವಸ್ಥೆಯನ್ನು ಇಲಾಖೆಯ ವತಿಯಿಂದ ಮಾಡಲಾಗುವುದು.

ಆಸಕ್ತರು ತಮ್ಮ ಪೂರ್ಣ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಮಾರ್ಚ್ 20 ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು.

ವಿಳಾಸ: ಕಾರ್ಯದರ್ಶಿಗಳು, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು - 560056.

ಇಲ್ಲವೇ ಅರ್ಜಿಗಳನ್ನು ಖುದ್ದಾಗಿ, ಅಂಚೆ ಮೂಲಕ ಅಥವಾ ಇಮೇಲ್ ಐಡಿ: [email protected] ಗೆ ಕಳುಹಿಸಬಹುದಾಗಿದೆ. ಅರ್ಜಿಯ ನಮೂನೆಯನ್ನು ಇಲಾಖೆಯ ವೆಬ್‌ಸೈಟ್ kannadasiri.karnataka.gov.in ನಿಂದ ಪಡೆಯಬಹುದು.

ಸೂಚನೆ: ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಯಾವುದೇ ರೀತಿಯ ಪ್ರಯಾಣ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಾಟಕದ ನಿರ್ದೇಶಕ ಸಿ.ಬಸವಲಿಂಗಯ್ಯ (ಮೊ.94485 38620) ಅವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು